ಚೈತ್ರಾ ಕುಂದಾಪುರ ವಿರುದ್ದ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ
ಉಳ್ಳಾಲ: ಕೋಮು ಪ್ರಚೋದನಕಾರಿಯಾಗಿ ಭಾಷಣ ಮಾಡಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕದಡಲು ಯತ್ನಿಸಿದ ಚೈತ್ರಾ ಕುಂದಾಪುರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನಾ ಸಭೆ ನಡೆಯಿತು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಅಧ್ಯಕ್ಷತೆಯಲ್ಲಿ ತೊಕ್ಕೋಟ್ಟು ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಯಿತು.
ಮಾಜಿ ಮೂಡ ಅಧ್ಯಕ್ಷರಾದ ಇಬ್ರಾಹಿಂ ಕೋಡಿಜಾಲ್ ಮಾತನಾಡಿ, ಈ ದೇಶ, ರಾಜ್ಯ, ಜಿಲ್ಲೆ ಅಭಿವೃದ್ಧಿಯಾಗಬೇಕಾದರೆ ಇಲ್ಲಿ ಕೋಮು ಸೌಹಾರ್ದಕ್ಕೆ ದಕ್ಕೆ ಬರಬಾರದು, ಯಾರು ಒಂದು ಧರ್ಮಕ್ಕೆ ಸೀಮಿತವಾಗಿ ಕೋಮು ಬಾಷಣ ಮಾಡುತ್ತಾರೋ ಅದನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಸಹಿಸುವುದಿಲ್ಲ ಎಂದರು.
ಎಸ್.ಸಿ, ಎಸ್.ಟಿ ಘಟಕದ ಮಾಜಿ ಜಿಲ್ಲಾಧ್ಯಕ್ಷ ಪದ್ಮನಾಭ ನರಿಂಗಾನ ಮಾತನಾಡಿದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಆಲ್ವಿನ್ ಡಿಸೋಜ ಪ್ರಾಸ್ತವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು.
ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು, ಮಾಜಿ ಸದಸ್ಯ ಸುರೇಖಾ ಚಂದ್ರಹಾಸ್, ಕಾಂಗ್ರೆಸ್ ವಕ್ತಾರ ದಿನೇಶ್ ರೈ, ಮಂಗಳೂರು ವಿಧಾನ ಸಭಾ ಮಹಿಳಾ ಇಂಟಕ್ ಅಧ್ಯಕ್ಷೆ ಕಲಾವತಿ, ಯು.ಬಿ ಸಲೀಂ, ಜಿಲ್ಲಾ ಯೂತ್ ಕಾಂಗ್ರೆಸ್
ಸುಹೈಲ್ ಕಂದಕ್ ಮಾತನಾಡಿದರು.
ಮಂಗಳೂರು ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಸಿದ್ದೀಕ್ ಕೊಳಂಗರೆ, ವಿಲ್ಮಾ ಆಲ್ಫ್ರೆಡ್, ಜಬ್ಬಾರ್ ಬೋಳಿಯಾರ್, ಉಳ್ಳಾಲ ನಗರ ಸಭೆ ಮಾಜಿ ಸದಸ್ಯ ಉಸ್ಮಾನ್ ಕಲ್ಲಾಪು, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಹ್ಮಾನ್ ಕೋಡಿಜಾಲ್, ಬೆಳ್ಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ಸತ್ತಾರ್ ಬೆಳ್ಮ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷ ದೇವಕಿ ಉಳ್ಳಾಲ್, ಕಿಶಾನ್ ಘಟಕದ ಅಧ್ಯಕ್ಷ ಪುರುಷೋತ್ತಮ್ ಶೆಟ್ಟಿ ಪಿಲಾರ್ , ಹಿಂದುಳಿದ ವರ್ಗದ ಅಧ್ಯಕ್ಷ ದೀಪಕ್ ಪಿಲಾರ್, ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಮುಟ್ಟಿಂಜ, ಜಮಾಲ್ ಅಜ್ಜಿನಡ್ಕ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುರೇಶ್ ಭಟ್ನಗರ, ಉಳ್ಳಾಲ ನಗರ ಸಭಾ ಅಧ್ಯಕ್ಷೆ ಚಿತ್ರಕಲಾ, ಉಪಾಧ್ಯಕ್ಷ ಅಯ್ಯೂಬ್ ಮಂಚಿಲ, ಸದಸ್ಯರಾದ ಬಾಝಿಲ್ ಡಿಸೋಜ, ಅಶ್ರಫ್, ಶಶಿಕಲಾ, ಯು.ಎ ಇಸ್ಮಾಯಿಲ್, ಅಝೀಝ್, ಭಾರತಿ,ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಅಲ್ಪ ಸಂಖ್ಯಾತ ಘಟಕದ ಕೋರ್ಡಿನೇಟರ್ ಡೆನ್ನಿಸ್ ಡಿಸೋಜ, ಮುನೀರ್ ಬಾವ ಇಂಟಕ್, ಶೈನಿ ಡಿಸೋಜ, ಮುನ್ನೂರು ಪಂಚಾಯತ್ ಅಧ್ಯಕ್ಷ ವಿಲ್ಫ್ರೆಡ್ ಡಿಸೋಜ, ಬೋಳಿಯಾರ್ ಪಂಚಾಯತ್ ಮಾಜಿ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಮನ್ಸೂರ್, ಶಕೂರ್ ಬೋಳಿಯಾರ್, ಪುಷ್ಠಿ ಮೊಹಮ್ಮದ್, ಝಕರಿಯ್ಯಾ ಮಲಾರ್, ಹಮೀದ್ ಹಸನ್ ಮಾಡೂರು, ಆಸಿಫ್ ಅಂಬಟಡಿ, ಸತ್ತಾರ್ ತಲಪಾಡಿ, ಯೋಗೇಂದ್ರ ಆಶ್ರಯ ಕಾಲನಿ, ಮಹಮ್ಮದ್ ಅಡ್ಕರೆ, ಬಶೀರ್ ಕೊಳಂಗರೆ, ಬಶೀರ್ ಮುಂಡೋಳಿ, ವಿಶಾಲ್ ಕೊಲ್ಯ, ಮೊಯಿದಿನ್ ಬಾವ ಕೊಮರಂಗಳ ಮೊದಲಾದವರು ಉಪಸ್ಥಿತರಿದ್ದರು.