ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಪಡೆಯಲು ಅರ್ಜಿ ಆಹ್ವಾನ

Update: 2021-10-09 17:22 GMT

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ ಸರಕಾರವು ನೀಡುವ ಪರಿಹಾರ ಹಣವನ್ನು ನೀಡಲು ಅರ್ಜಿ ಆಹ್ವಾನಿಸಿದೆ. ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿ ಬಡತನ ರೇಖೆಗಿಂತ ಕೆಳಗಿನ ಕುಟುಂಬಕ್ಕೆ ಸೇರಿದ್ದರೆ ಕೇಂದ್ರ ಸರಕಾರವು ‘ಸಂಧ್ಯಾ ಸುರಕ್ಷಾ ಯೋಜನೆ’ ಅಡಿ 1 ಲಕ್ಷ ರೂ.ಗಳು ಮತ್ತು ರಾಜ್ಯ ವಿಪತ್ತು ಪರಿಹಾರ ನಿಧಿ(ಎಸ್‍ಡಿಆರ್‍ಎಫ್)ಯಿಂದ 50 ಸಾವಿರ ರೂ.ಗಳು ಸೇರಿದಂತೆ ಒಟ್ಟು 1.50 ಲಕ್ಷ ರೂ.ಗಳನ್ನು ಪಾವತಿಸಲಿದೆ.

ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿ ಬಡತನ ರೇಖೆಗಿಂತ ಕೆಳಗಿನ ಕುಟುಂಬಕ್ಕೆ ಸೇರದೇ ಇದ್ದರೆ ಮೃತಪಟ್ಟಯ ಕುಟುಂಬಕ್ಕೆ 50 ಸಾವಿರ ರೂ.ಗಳ ಪರಿಹಾರ ಮೊತ್ತವನ್ನು ‘ರಾಜ್ಯ ವಿಪತ್ತು ಪರಿಹಾರ ನಿಧಿ’ (ಎಸ್‍ಡಿಆರ್‍ಎಫ್) ಪಾವತಿ ಮಾಡಲಾಗುತ್ತದೆ. 

ಮೃತಪಟ್ಟ ವ್ಯಕ್ತಿಗಳ ಕುಟುಂಬದ ವಾರಸುದಾರರು ತಾವು ವಾಸವಾಗಿರುವ ವಾರ್ಡ್‍ಗಳ ಕಂದಾಯ ಅಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಮೃತ ವ್ಯಕ್ತಿಗೆ ಸಂಬಂದಿಸಿದ ದಾಖಲೆಗಳಾದ ಕೋವಿಡ್-19 ಪಾಸಿಟಿವ್ ವರದಿ ಮತ್ತು ಕೋವಿಡ್ ರೋಗಿ ಸಂಖ್ಯೆ-ಬಿಯು ಸಂಖ್ಯೆ, ಮರಣ ಪ್ರಮಾಣ ಪತ್ರ, ಬಿಪಿಎಲ್ ಪಡಿತರ ಚೀಟಿ, ಆಧಾರ್ ಪ್ರತಿ ಮತ್ತು ಅರ್ಜಿದಾರನಿಗೆ ಸಂಬಂಧಿಸಿದ ದಾಖಲೆಗಳಾದ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಅರ್ಜಿದಾರರ ಸ್ವಯಂ ಘೋಷಣಾ ಪತ್ರ, ಹಾಗೂ ಮೃತ ವ್ಯಕ್ತಿಯ ಪತಿ ಅಥವಾ ಪತ್ನಿಯನ್ನು ಹೊರತುಪಡಿಸಿ ಕುಟುಂಬದ ಇತರೆ ಸದಸ್ಯರು ಅರ್ಜಿ ಸಲ್ಲಿಸಿದ್ದಲ್ಲಿ ಕುಟುಂಬದ ಉಳಿದ ಸದಸ್ಯರಿಂದ ನಿರಾಕ್ಷೇಪಣಾ ಪತ್ರವನ್ನು ಸಲ್ಲಿಸಬೇಕಾಗಿರುತ್ತದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News