ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ನಿಧನ

Update: 2021-10-10 17:30 GMT

ಬೆಂಗಳೂರು, ಅ.10: ಕನ್ನಡದ ಹಿರಿಯ ನಟ ಸತ್ಯಜಿತ್ ರವಿವಾರ ತಡರಾತ್ರಿ 2 ಗಂಟೆ ಸುಮಾರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸಹಕರಿಸದೇ ಮೃತಪಟ್ಟಿದ್ದಾರೆ.

ಮೃತದೇಹವನ್ನು ಹೆಗಡೆನಗರದಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 8 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದ್ದು, ನಂತರ ಮಧ್ಯಾಹ್ನ 3 ಗಂಟೆಗೆ ಹೆಗಡೆನಗರದ ಖಬರ್‍ಸ್ಥಾನ್‍ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

ವೃತ್ತಿಯಲ್ಲಿ ಬಸ್ ಚಾಲಕರಾಗಿದ್ದ ಸತ್ಯಜಿತ್ ನಟನೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದು, ಅನೇಕ ಊರುಗಳಿಗೆ ತೆರಳಿ ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. ಸತ್ಯಜಿತ್ ಅವರ ನಿಜವಾದ ಹೆಸರು ಸಯ್ಯದ್ ನಿಜಾಮುದ್ದೀನ್ ಆಗಿದ್ದು, ಚಿತ್ರರಂಗಕ್ಕೆ ಪ್ರವೇಶಿಸಿದ ಬಳಿಕ ತಮ್ಮ ಹೆಸರನ್ನು ಬದಲಿಸಿಕೊಂಡರು.

ಸತ್ಯಜಿತ್ ಕನ್ನಡದಲ್ಲೂ ಮಾತ್ರವಲ್ಲದೇ ಪರಭಾಷಾ ಚಿತ್ರಗಳು ಸೇರಿ 600 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದರು. 'ಶಿವ ಮೆಚ್ಚಿದ ಕಣ್ಣಪ್ಪ', 'ರಣರಂಗ', 'ನಮ್ಮೂರ ರಾಜ', 'ನಮ್ಮೂರ ಹಮ್ಮೀರ', 'ಪೊಲೀಸ್ ಲಾಕಪ್', 'ಮನೆದೇವ್ರು', 'ಮಂಡ್ಯದ ಗಂಡು', 'ಪೊಲೀಸ್ ಸ್ಟೋರಿ', 'ಸರ್ಕಲ್ ಇನ್‍ಸ್ಪೆಕ್ಟರ್', 'ಪಟೇಲ', 'ಅಭಿ', 'ಆಪ್ತಮಿತ್ರ', 'ಅರಸು', 'ಇಂದ್ರ', 'ಉಪ್ಪಿ 2', 'ಮಾಣಿಕ್ಯ', ಮುಂತಾದ ಹಲವು ಚಿತ್ರಗಳಲ್ಲಿ ಸತ್ಯಜಿತ್ ನಟಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News