ಪುತ್ತೂರು; ರಸ್ತೆ ಅಪಘಾತಕ್ಕೆ ಬೈಕ್ ಸವಾರ ಬಲಿ

Update: 2021-10-10 05:20 GMT
ಅಝೀಝ್

ಪುತ್ತೂರು : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಗೊಬ್ಬರದ ಲಾರಿ ಮತ್ತು ಬೈಕ್ ನಡುವೆ ರವಿವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ.

ಮೃತರನ್ನು ಇಲ್ಲಿನ ಗೋಲ್ಡನ್ ಬೇಕರಿಯ ಮಾಲಕ ಅಝೀಝ್ ಎಂದು ಗುರುತಿಸಲಾಗಿದೆ.

ಅಝೀಝ್ ಅವರು ಇಂದು ಬೆಳಗ್ಗೆ ತನ್ನ ಅಂಗಡಿಗೆ ಹೋಗುತ್ತಿರುವಾಗ ಈ ಅಪಘಾತ ಸಂಭವಿಸಿದೆ. 

ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News