ಬೆಂಗಳೂರು ಉಸ್ತುವಾರಿ ನಿಭಾಯಿಸಲು ಆರ್.ಅಶೋಕ್ ಸಮರ್ಥರಿದ್ದಾರೆ; ಸಚಿವ ಸೋಮಶೇಖರ್

Update: 2021-10-10 13:48 GMT

ಮೈಸೂರು,ಅ.10: ಬೆಂಗಳೂರು ಉಸ್ತುವಾರಿ ನಿಭಾಯಿಸಲು ಸಚಿವ ಆರ್.ಅಶೋಕ್ ಸಮರ್ಥರಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ.ಟಿ.ಸೋಮಶೇಖರ್ ಹೇಳಿದ್ದಾರೆ.

ಬೆಂಗಳೂರು ಉಸ್ತುವಾರಿ ವಿಚಾರವಾಗಿ ಆರ್.ಅಶೋಕ್ ಮತ್ತು ವಿ.ಸೋಮಣ್ಣ ನಡುವಿನ ಜಟಾಪಟಿ ಹಿನ್ನಲೆಯಲ್ಲಿ ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗ ಮಾತನಾಡಿದ ಅವರು, ಕಂದಾಯ ಸಚಿವ ಅರ್.ಆಶೋಕ್ ಹಿರಿಯರು ಪ್ರಭಾವಿ ಸಚಿವರು, ಅವರು ಬೆಂಗಳೂರು ಉಸ್ತುವಾರಿ  ನಿಬಾಯಿಸಲು ಸಮರ್ಥರಿದ್ದಾರೆ ಎಂದು ಸಮರ್ಥಿಸಿಕೊಂಡರು.

ಸಚಿವ ಆರ್.ಅಶೋಕ್ ಮೂಲ ಬಿಜೆಪಿಯವರು ಜೊತೆಗೆ ಹಿರಿಯರು, ನಾವೆಲ್ಲ ಹೊರಗಿನಿಂದ ಬಂದು ಚುನಾವಣೆಯಲ್ಲಿ ಗೆದ್ದು ಮಂತ್ರಿಗಳಾಗಿರುವವರು, ಹಾಗಾಗಿ ಅಶೋಕ್ ಬೆಂಗಳೂರು ಉಸ್ತುವಾರಿ ನಿಭಾಯಿಸಲಿದ್ದಾರೆ ಎಂದು ಹೇಳಿದರು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಸಲಾಗಿದೆ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವ ಎಸ್.ಟಿ.ಸೋಮಶೇಖರ್, ಐಟಿ ದಾಳಿ ಬಗ್ಗೆ ಯಡಿಯೂರಪ್ಪ ಅವರೇ ಸ್ಪಷ್ಟನೆ ನೀಡಿದ್ದಾರೆ. ಅವರನ್ನು ಗುರಿಯಾಗಿಸಿಕೊಂಡು ಐಟಿ ದಾಳಿ ನಡೆದಿಲ್ಲ,  ಐಟಿ ದಾಳಿ ನಿರಂತರ ಪ್ರಕ್ರಿಯೆಯಾಗಿದೆ. ಈ ವಿಚಾರದಲ್ಲಿ ಪ್ರತಿಪಕ್ಷ ನಾಯಕರು ಮಾಡುತ್ತಿರುವ ಆರೋಪಗಳು ನಿರಾಧಾರ ಎಂದು ಹೇಳಿದರು.

ಐಟಿ ದಾಳಿಯಿಂದ ಉಪಚುನಾವಣೆ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ, ಹಾನಗಲ ಮತು ಸಿಂಧಗಿ ಇರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ.  ಹಾನಗಲ್‍ನಲ್ಲಿ ಮಾಜಿ ಸಚಿವ ದಿವಂಗತ ಸಿ.ಎಂ.ಉದಾಸಿ ಕುಟುಂಬಕ್ಕೆ ಟಿಕೆಟ್ ತಪ್ಪಿರುವುದುರಿಂದ ಯಾವುದೇ ಪರಿಣಾಮ ಬೀರುವುದಿಲ್ಲ, ಟಿಕೆಟ್ ಹಂಚಿಕೆ ಹೈಕಮಾಂಡ್ ತೀರ್ಮಾನವಾಗಿದೆ. ಹೈಕಮಾಂಡ್ ತೀರ್ಮಾನವವನ್ನು ಯಾರೂ ಪ್ರಶ್ನಿಸಲಾಗುವುದಿಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News