×
Ad

ಬೆಂಗಳೂರು; ಓದಿನಲ್ಲಿ ಆಸಕ್ತಿ ಇಲ್ಲವೆಂದು ಪತ್ರ ಬರೆದಿಟ್ಟು ಮನೆ ತೊರೆದಿದ್ದ ವಿದ್ಯಾರ್ಥಿಗಳು ಪತ್ತೆ

Update: 2021-10-11 13:27 IST
ಸಾಂದರ್ಭಿಕ ಚಿತ್ರ

ಬೆಂಗಳೂರು: ಓದಿನಲ್ಲಿ ಆಸಕ್ತಿ ಇಲ್ಲ, ಕ್ರೀಡೆಯಲ್ಲಿ ಸಾಧನೆ ಮಾಡುತ್ತೇವೆ ಎಂದು ಪತ್ರ ಬರೆದು ಮನೆ ಬಿಟ್ಟು ಹೋಗಿದ್ದ 7 ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸೋಮವಾರ ಪತ್ತೆಯಾಗಿದ್ದಾರೆ.

ಪರೀಕ್ಷಿತ್, ಕಿರಣ್ ಮತ್ತು ನಂದನ್ ಎಂಬ ಮಕ್ಕಳು ನಗರದ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದ್ದಾರೆ. ಆನಂದ್ ರಾವ್ ವೃತ್ತದ ಬಳಿ ಸುತ್ತಾಡುತ್ತಿದ್ದ ವಿದ್ಯಾರ್ಥಿಗಳನ್ನ ಪೇಪರ್ ಆಯುವ ವ್ಯಕ್ತಿ ಮಾತಾಡಿಸಿದ್ದಾರೆ. ಆದರೆ ವಿದ್ಯಾರ್ಥಿಗಳು ಮಾತನಾಡದೆ ಓಡಿ ಹೋಗಿದ್ದರಿಂದ ಅನುಮಾನಗೊಂಡ ಪೇಪರ್ ಆಯುವ ವ್ಯಕ್ತಿ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.

ಮೈಸೂರಿಗೆ ತೆರಳಿದ್ದ ವಿದ್ಯಾರ್ಥಿಗಳು ಬಳಿಕ ತಡರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ ಎನ್ನಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ನಾಪತ್ತೆಯಾಗಿರುವ  ಉಳಿದ ನಾಲ್ವರು ವಿದ್ಯಾರ್ಥಿಗಳ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ತಿಳಿದು ಬಂದಿದೆ.

ಸದ್ಯಕ್ಕೆ ವಿದ್ಯಾರ್ಥಿಗಳು ಬೆಂಗಳೂರಿನ ಉಪ್ಪಾರಪೇಟೆ ಠಾಣೆಯದ್ದು, ವಿದ್ಯಾರ್ಥಿಗಳು ಪತ್ತೆಯಾಗಿರುವ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಪರೀಕ್ಷಿತ್, ಕಿರಣ್ ಮತ್ತು ನಂದನ್ ಪೋಷಕರು ಠಾಣೆಗೆ ಆಗಮಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News