ಅನೈತಿಕ ಪೊಲೀಸ್‌ಗಿರಿ; ಶಾಸಕರ ಪ್ರಭಾವದಿಂದ ಆರೋಪಿಗಳಿಗೆ ಜಾಮೀನು: ಮಾಜಿ ಸಚಿವ ಅಭಯಚಂದ್ರ ಆರೋಪ

Update: 2021-10-11 13:15 GMT

ಮೂಡುಬಿದಿರೆ: ಹಿಂದೂ ಮಹಿಳೆಯರಿಬ್ಬರು ಮುಸ್ಲಿಂ ದಂಪತಿ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾರೆಂಬ ಸಿಟ್ಟಿನಲ್ಲಿ ಮಹಿಳೆಯರಿಗೆ ಹಲ್ಲೆ ನಡೆಸಿ ಜೀವಬೆದರಿಕೆಯೊಡ್ಡಿದ ಪ್ರಕರಣದಲ್ಲಿ ಆರೋಪಿಗಳನ್ನು ಬಿಡುಗಡೆಗೊಳಿಸಲಾಗಿದೆ. ಮೂಡುಬಿದಿರೆ ಶಾಸಕರ ಪ್ರಭಾವದಿಂದಾಗಿ ಆರೋಪಿಗಳನ್ನು ಬಿಡುಗಡೆ ಮಾಡಲಾಗಿದೆ. ಸ್ವತಃ ಶಾಸಕರೇ ಠಾಣೆಗೆ ತೆರಳಿ ಆರೋಪಿಗಳನ್ನು ಕರೆತಂದಿದ್ದು, ನೈತಿಕ ಪೊಲೀಸ್‌ಗಿರಿ ಬೆಂಬಲ ನೀಡಿದ್ದಾರೆ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಈ ಘಟನೆಯನ್ನು ಆರೋಪಿ ತನ್ನ ಸ್ಟೇಟಸ್‌ನಲ್ಲಿ ಹಾಕಿ ಸಂಭ್ರಮಿಸಿ ಕಾನೂನಿಗೆ ಸವಾಲೊಡ್ಡಿದ್ದಾರೆ ಎಂದು ಆರೋಪಿಸಿದರು. 

ಈಗಿನ ಶಾಸಕರು ಬೆಂಬಲ ನೀಡುತ್ತಿರುವುದರಿಂದ ಜನರಲ್ಲಿ ಭಯದ ವಾತಾವರಣ ಉಂಟಾಗಿದೆ ಎಂದರು. ಜಿಲ್ಲಾ ಪೊಲೀಸ್ ಕಮಿಷನರ್‌ಗೆ ದೂರು ನೀಡಲಾಗುವುದು. ಅಲ್ಲದೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರ ಮೂಲಕ ವಿಧಾನಸಭೆಯಲ್ಲಿ ಪ್ರಸ್ತಾಪಿಸಲಾಗುವುದು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರ, ಪುರಸಭಾ ಸದಸ್ಯರಾದ ಸುರೇಶ್ ಕೋಟ್ಯಾನ್, ಪುರಂದರ ದೇವಾಡಿಗ, ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News