×
Ad

ಎಸ್‌ಸಿಡಿಸಿಸಿ ಬ್ಯಾಂಕಿನ ಶಂಕರನಾರಾಯಣ ಶಾಖೆ ಶುಭಾರಂಭ

Update: 2021-10-11 19:41 IST

ಕುಂದಾಪುರ ಅ.11: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ 106ನೇ ನೂತನ ಶಂಕರನಾರಾಯಣ ಶಾಖೆಯು ಸೋಮವಾರ ಶುಭಾರಂಭ ಗೊಂಡಿತು.

ನೂತನ ಶಾಖೆಯನ್ನು ಉದ್ಘಾಟಿಸಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿ, ಸಹಕಾರಿ ಸಂಘ ಗಳು ಎಂದಿಗೂ ವಿಲೀನಗೊಳ್ಳುವುದಿಲ್ಲ. ಈ ಸಂಘಗಳು ಜನರಿಗೆ ಆರ್ಥಿಕ ಶಕ್ತಿಯನ್ನು ನೀಡುತ್ತವೆ ಮತ್ತು ಅವರನ್ನು ಸ್ವಾವಲಂಬಿಗಳಾಗಲು ಪ್ರೋತ್ಸಾಹಿಸು ತ್ತವೆ. ನಮ್ಮ ಬ್ಯಾಂಕ್ ಇದು ಜನರ ಬಳಿಗೆ ಹೋಗುತ್ತದೆ ಮತ್ತು ಕೆಲಸ ಮಾಡುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಟ್ಟಡದ ಮಾಲಕ ಎಚ್. ಸದಾಶಿವ ನಾಯಕ್ ಮತ್ತು ಶಂಕರನಾರಾಯಣ ಶಾಖೆಯ ವ್ಯವಸ್ಥಾಪಕ ಚಂದ್ರಶೇಖರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಬ್ಯಾಂಕಿನ ಕಂಪ್ಯೂಟರ್ ಸೌಲಭ್ಯವನ್ನು ಶಂಕರನಾರಾಯಣ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕೆ.ಸಚ್ಚಿದಾನಂದ ವೈದ್ಯ ಹಾಗೂ ಶಂಕರನಾರಾ ಯಣ ಗ್ರಾಪಂ ಅಧ್ಯಕ್ಷೆ ಲತಾ ಸಂತೋಷ ದೇವಾಡಿಗ ಸ್ಟ್ರಾಂಗ್ ರೂಂನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಟ್ಟಡದ ಮಾಲಕ ಎಚ್.ಸದಾಶಿವ ನಾಯಕ್ ಮತ್ತು ಶಂಕರನಾರಾಯಣ ಶಾಖೆಯ ವ್ಯವಸ್ಥಾಪಕ ಚಂದ್ರಶೇಖರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಎಸ್‌ಸಿಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಜಿ.ಎಸ್.ಹರಿಪ್ರಸಾದ್ ಆಚಾರ್ ಶುಭ ಹಾರೈಸಿದರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಕೆಎಂಎಫ್ ನಿರ್ದೇಶಕ ಗೋಪಾಲಕೃಷ್ಣ ಕಾಮತ್, ಎಸ್‌ಸಿಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಬಿ, ನಿರ್ದೇಶಕರಾದ ಕೆ.ಹರಿಶ್ಚಂದ್ರ, ಬಿ.ಅಶೋಕ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ರಾಜು ಪೂಜಾರಿ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News