ದಿಲ್ಲಿ ಪೊಲೀಸ್ ಆಯುಕ್ತರನ್ನಾಗಿ ರಾಕೇಶ್ ಅಸ್ಥಾನಾ ನೇಮಿಸಿದ್ದನ್ನು ಪ್ರಶ್ನಿಸಿದ್ದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Update: 2021-10-12 05:39 GMT

ಹೊಸದಿಲ್ಲಿ: ಗುಜರಾತ್-ಕೇಡರ್ ನ ಭಾರತೀಯ ಪೊಲೀಸ್ ಸೇವೆಗಳ (ಐಪಿಎಸ್) ಅಧಿಕಾರಿ ರಾಕೇಶ್ ಅಸ್ಥಾನಾ ಅವರನ್ನು ದಿಲ್ಲಿ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ಇಂದು ವಜಾಗೊಳಿಸಿದೆ.

ಅಂತರ್ ಕೇಡರ್ ನಿಯೋಜನೆ ಹಾಗೂ  ಸೇವಾ ವಿಸ್ತರಣೆ ಆದೇಶದೊಂದಿಗೆ ಅಸ್ಥಾನಾ ಅವರನ್ನು  ದಿಲ್ಲಿ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿದ ಗೃಹ ವ್ಯವಹಾರಗಳ ಸಚಿವಾಲಯದ ಜುಲೈ 27 ರ ಆದೇಶವನ್ನು ರದ್ದುಗೊಳಿಸುವಂತೆ ಅರ್ಜಿದಾರರು ಕೋರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News