ವಿಟ್ಲ: ಮುಸ್ಲಿಮರ ಮೇಲಿನ ದೌರ್ಜನ್ಯ ಖಂಡಿಸಿ ಎಸ್ಕೆಎಸ್ಸೆಸ್ಸೆಫ್ ಪ್ರತಿಭಟನೆ

Update: 2021-10-12 07:46 GMT

ವಿಟ್ಲ, ಅ.12: ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಾಗೂ ಪ್ರವಾದಿ ಮುಹಮ್ಮದ್(ಸ.)ರನ್ನು ಅವಹೇಳಿಸುವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಎಸ್ಕೆಎಸ್ಸೆಸ್ಸೆಫ್ ವಿಟ್ಲ ವಲಯದ ವತಿಯಿಂದ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಸೋಮವಾರ ಪ್ರತಿಭಟನೆ ನಡೆಯಿತು.

 ಪ್ರಚೋದನಕಾರಿ ಭಾಷಣ ಮಾಡಿ ಸಮಾಜದ ಸ್ವಸ್ಥ ಕೆಡಿಸುವವರ ವಿರುದ್ಧ ಹಾಗೂ ಪ್ರವಾದಿಯವರನ್ನು ನಿಂದಿಸಿ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವವರ ಮೇಲೆ ತಕ್ಷಣ ಕ್ರಮ ಜರುಗಿಸುವಂತೆ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.

    ಯುವ ಚಿಂತಕ, ಬರಹಗಾರ ಉವೈಸ್ ತೋಕೆ ಮುಖ್ಯ ಭಾಷಣ ಮಾಡಿದರು. ಸಾಲೆತ್ತೂರು ರೇಂಜ್ ಪ್ರಧಾನ  ಕಾರ್ಯದರ್ಶಿ ಸಿ.ಎಚ್.ಇಬ್ರಾಹೀಂ ಮುಸ್ಲಿಯಾರ್ ಪ್ರಸ್ತಾವನೆಗೈದರು. ವಿಟ್ಲ ವಲಯದ ಪ್ರಧಾನ ಕಾರ್ಯದರ್ಶಿ ಕೆ.ಎ.ಎಂ.ಮುಹಮ್ಮದ್ ರಫೀಕ್ ಮುಸ್ಲಿಯಾರ್ ಸ್ವಾಗತಿಸಿ, ವಂದಿಸಿದರು.

ವಿವಿಧ ವಲಯಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News