ಶಿರಸಿ-ಕುಮಟಾ ರಸ್ತೆ ಅಗಲೀಕರಣ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Update: 2021-10-12 12:36 GMT

ಬೆಂಗಳೂರು, ಅ.12: ಶಿರಸಿ-ಕುಮಟಾ ನಡುವಿನ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಶ್ನಿಸಿ ಯುನೈಟೆಡ್ ಕನ್ಸರ್ವೇಷನ್ ಮೂಮೆಂಟ್ ಚಾರಿಟಬಲ್ ಅಂಡ್ ವೆಲ್ಫೇರ್ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಶಿರಸಿ-ಕುಮಟಾ ನಡುವಿನ ರಾಷ್ಟ್ರೀಯ ಹೆದ್ದಾರಿ ಅಗಲೀಕರಣದಿಂದ 2 ಲಕ್ಷಕ್ಕೂ ಅಧಿಕ ಮರ ಕಡಿಯಲಾಗುತ್ತದೆ ಹಾಗೂ ಹೆದ್ದಾರಿ ಅಗಲೀಕರಣಕ್ಕೆ ಶಾಸನಬದ್ಧ ಸಮ್ಮತಿ ಇಲ್ಲದಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠ, ತಿರಸ್ಕರಿಸಿ ಆದೇಶಿಸಿದೆ.

ಯೋಜನೆಯ ಉದ್ದವು 100 ಕಿಮೀಗಿಂತಕಡಿಮೆ ಇದೆ ಮತ್ತು ಹೆಚ್ಚುವರಿ ಮಾರ್ಗದ ಹಾದಿ ಸಹ 40 ಮೀಟರ್‍ಗಿಂತ ಕಡಿಮೆ ಇದೆ. ಈ ಅಗಲೀಕರಣವೂ ಹೆಚ್ಚಿನ ಸಾರ್ವಜನಿಕ ಹಿತಾಸಕ್ತಿಯನ್ನು ಹೊಂದಿರುವುದರಿಂದ, ಪ್ರಕರಣದ ವಿಲಕ್ಷಣ ಸಂಗತಿಗಳು ಮತ್ತು ಸನ್ನಿವೇಶಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕೋರ್ಟ್ ಹೇಳಿದೆ.

ಈ ರಸ್ತೆಯಲ್ಲಿ ಅತ್ಯಂತ ವಿರಳ ವಾಹನ ಸಂಚಾರವಿದ್ದು ಪಶ್ಚಿಮ ಘಟ್ಟದ ನಿತ್ಯಹರಿದ್ವರ್ಣ ಕಾಡಿನ ನಡುವೆ ಈ ರಸ್ತೆ ಹಾದು ಹೋಗುತ್ತಿದೆ. ಪರಿಸರದ ಮೇಲಿನ ವ್ಯತಿರಿಕ್ತ ಪರಿಣಾಮವನ್ನು ಪರಿಗಣಿಸದೇ ಅವೈಜ್ಞಾನಿಕ ರೀತಿಯಲ್ಲಿ ಈ ರಸ್ತೆಯನ್ನು ಅಗಲಿಕರಣ ಮಾಡಲಾಗುತ್ತಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News