ಪ್ರಧಾನಿ ಮೋದಿ ಸಲಹೆಗಾರರಾಗಿ ಅಮಿತ್ ಖರೆ ನೇಮಕ

Update: 2021-10-12 14:31 GMT
photo: ANI

ಹೊಸದಿಲ್ಲಿ: ಕಳೆದ ತಿಂಗಳು ಐಎಎಸ್ ನಿಂದ ನಿವೃತ್ತರಾಗಿದ್ದ ಮಾಜಿ ಉನ್ನತ ಶಿಕ್ಷಣ ಕಾರ್ಯದರ್ಶಿ ಅಮಿತ್ ಖರೆ ಅವರನ್ನು ಮಂಗಳವಾರ ಗುತ್ತಿಗೆ ಆಧಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗಾರರಾಗಿ ನೇಮಕ ಮಾಡಲಾಗಿದೆ.

1985 ರ ಬ್ಯಾಚಿನ  ಜಾರ್ಖಂಡ್ ಕೇಡರ್ ನ ಐಎಎಸ್ ಅಧಿಕಾರಿಯಾಗಿರುವ ಖರೆ  ಉನ್ನತ ಶಿಕ್ಷಣ ಕಾರ್ಯದರ್ಶಿಯಾಗಿ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ರೂಪಿಸಲು ಸಹಾಯ ಮಾಡಿದ್ದರು.

ಐಐಎಂ ಅಹಮದಾಬಾದ್‌ನಿಂದ ಎಂಬಿಎ ಪದವಿ ಪಡೆದಿರುವ ಖರೆ, 2019 ರ ಡಿಸೆಂಬರ್‌ನಲ್ಲಿ ಉನ್ನತ ಶಿಕ್ಷಣ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಅವರು ಮೇ 2018 ಮತ್ತು ಡಿಸೆಂಬರ್ 2019 ರ ನಡುವೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News