ವಿಧಾನಸಭೆ ಉಪಚುನಾವಣೆ; ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲು ಸೂಚನೆ

Update: 2021-10-12 15:18 GMT

ಬೆಂಗಳೂರು, ಅ.12: ರಾಜ್ಯ ಚುನಾವಣಾ ಆಯೋಗವು ರಾಜ್ಯದಲ್ಲಿನ ಸಿಂಧಗಿ ಹಾಗೂ ಹಾನಗಲ್ ಮತ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಚುನಾವಣೆ ನಡೆಯುವ ಈ ಎರಡು ಕ್ಷೇತ್ರಗಳಿಗೆ ಅ.30ರಂದು ಮತದಾನ ನಡೆಸಲು ಘೋಷಿಸಿರುವುದರಿಂದ ಮತ ಕ್ಷೇತ್ರಗಳ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆಯನ್ನಾಗಿ ಘೋಷಿಸಲು ಸೂಕ್ತ ಆದೇಶ ಹೊರಡಿಸಬೇಕು ಎಂದು ಸೂಚಿಸಿದೆ.

ಉಪ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಸಂಬಂಧಪಟ್ಟ ಕಾರ್ಯ ವ್ಯಾಪ್ತಿಯಲ್ಲಿ ಬರುವ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳನ್ನು ಒಳಪಟ್ಟಂತೆ ರಾಷ್ಟ್ರೀಯ ಹಬ್ಬ ಮತ್ತು ರಜಾ ದಿನಗಳ ಕಾಯ್ದೆ, 1963 ರ ಕಲಂ 3(ಎ)ರನ್ವಯ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅರ್ಹರಿರುವ ಎಲ್ಲ ಕಾರ್ಮಿಕ ಮತದಾರರಿಗೆ ಅ.30ರಂದು ವೇತನ ಸಹಿತ ರಜೆ ನೀಡಿ, ಎಲ್ಲ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡಬೇಕು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News