ಕುಂದಾಪುರದಲ್ಲಿ ರೈತ ಹುತಾತ್ಮ ದಿನಾಚರಣೆ

Update: 2021-10-12 16:54 GMT

ಕುಂದಾಪುರ, ಅ.12: ಆಡಳಿತ ವೈಫಲ್ಯದಿಂದ ಕೇಂದ್ರ ಸರಕಾರವು ಕಂಗೆಟ್ಟಿದ್ದು, ಸರಕಾರದ ವಿರುದ್ಧ ಹೋರಾಟ ನಡೆಸುವವರನ್ನು ಹತ್ಯೆ ಮಾಡುವ ಹೀನ ಕೃತ್ಯಕ್ಕೆ ಮುಂದಾಗುತ್ತಿದೆ ಎಂದು ಸಿಐಟಿಯು ತಾಲೂಕು ಸಂಚಾಲಕ ಎಚ್.ನರಸಿಂಹ ಟೀಕಿಸಿದ್ದಾರೆ.

ಸಂಯುಕ್ತ ಹೋರಾಟ-ಕರ್ನಾಟಕದ ನೇತೃತ್ವದಲ್ಲಿ ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ಮಂಗಳವಾರ ನಡೆದ ರೈತ ಹುತಾತ್ಮ ದಿನಾಚರೆಯಲ್ಲಿ ಅವರು ಮಾತನಾಡುತಿದ್ದರು.

ಸಿಐಟಿಯು ರಾಜ್ಯ ಉಪಾಧ್ಯಕ್ಷರಾದ ಕೆ.ಶಂಕರ್ ಮಾತನಾಡಿ, ಕೃತ್ಯದಲ್ಲಿ ತೊಡಗಿಸಿಕೊಂಡ ಬಿಜೆಪಿ ಸಂಸದರ ಮಗ ಆಶಿಷ್ ಮಿಶ್ರಾ ಅವರನ್ನು ರಕ್ಷಿಸಿ ಅಮಾಯಕರ ಮೇಲೆ ದೂರು ದಾಖಲು ಮಾಡುವ ವ್ಯವಸ್ಥಿತ ಪ್ರಯತ್ನ ಮಾಡಲಾಗುತ್ತಿದೆ. ಕೊಲೆ ಮಾಡುವುದರ ಮೂಲಕ ಯಾವುದೇ ಹೋರಾಟ ವನ್ನು ಹತ್ತಿಕಲು ಸಾಧ್ಯವಿಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹುತಾತ್ಮರಾದ ರೈತರಿಗೆ ಹಾಗೂ ಜಮ್ಮು ಕಾಶ್ಮೀರದಲ್ಲಿ ಮಡಿದ ಸೈನಿಕರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಸಿಐಟಿಯು ಮುಖಂಡರಾದ ಸುರೇಶ್ ಕಲ್ಲಾಗರ, ಚಂದ್ರಶೇಖರ, ವೆಂಕಟೇಶ ಕೋಣಿ, ಮಹಾಬಲವಡೇರ ಹೋಬಳಿ, ಬಲ್ಕೀಸ್, ನಿತನ್, ಸಂತೋಷ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News