ಅಮಿತ್ ಶಾ ಅವರಿಂದ ಜಮ್ಮು-ಕಾಶ್ಮೀರದಲ್ಲಿ ಹೊಸ ಯುಗ ಆರಂಭ: ಎನ್ ಎಚ್ ಆರ್ ಸಿ ಮುಖ್ಯಸ್ಥ

Update: 2021-10-12 17:29 GMT
photo:twitter

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರ ಹಾಗೂ  ಈಶಾನ್ಯ ರಾಜ್ಯದಲ್ಲಿ ಶಾಂತಿಯುತ ಪರಿಸ್ಥಿತಿ ನೆಲೆಸಿದ ಕೀರ್ತಿ ಗೃಹ ಸಚಿವ ಅಮಿತ್ ಶಾ ಅವರಿಗೆ ಸಲ್ಲಬೇಕು. ಈ ಸಚಿವರ 'ಅವಿರತ ಪ್ರಯತ್ನಗಳು' ಈ ಪ್ರದೇಶಗಳಿಗೆ ಹೊಸ ಯುಗವನ್ನು ತಂದವು ಎಂದು ಎನ್ ಎಚ್ ಆರ್ ಸಿ ಮುಖ್ಯಸ್ಥ ಹಾಗೂ ಜಸ್ಟಿಸ್(ನಿವೃತ್ತ) ಅರುಣ್ ಕುಮಾರ್ ಮಿಶ್ರಾ ಪ್ರತಿಪಾದಿಸಿದರು .

"ನಿಮ್ಮಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಈಗ ಹೊಸ ಯುಗ ಆರಂಭವಾಗಿದೆ" ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸ್ಥಾಪನೆಯ ದಿನದಂದು ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರನ್ನು ಉದ್ದೇಶಿಸಿ ನಿವೃತ್ತ ನ್ಯಾಯಮೂರ್ತಿ ಮಿಶ್ರಾ ಹೇಳಿದರು.

ಶಾ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ  ಇತರ ಗಣ್ಯರೊಂದಿಗೆ ಸಮಾರಂಭದಲ್ಲಿ ಹಾಜರಿದ್ದರು.

ಭಾರತವು ಜಾಗತಿಕ ಮಟ್ಟದಲ್ಲಿ ಪ್ರಬಲ ಸಂಸ್ಥೆಯಾಗಿ ಹೊರಹೊಮ್ಮಿದೆ ಹಾಗೂ ಹೊಸ ಶಕ್ತಿಯಾಗಿ ಗುರುತಿಸಿಕೊಂಡಿದೆ ಎಂದು ಹೇಳಿದ  ನ್ಯಾಯಮೂರ್ತಿ ಮಿಶ್ರಾ ಅವರು ಭಾರತದ ಜನತೆ, ದೇಶದ ಸಾಂವಿಧಾನಿಕ ವ್ಯವಸ್ಥೆ ಹಾಗೂ  ಅದರ ನಾಯಕತ್ವ ಇದಕ್ಕೆ ಕಾರಣವೆಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News