ಬಿವಿಟಿಯಲ್ಲಿ ಉಚಿತ ವಸ್ತ್ರವಿನ್ಯಾಸ ತರಬೇತಿಗೆ ಅರ್ಜಿ ಆಹ್ವಾನ

Update: 2021-10-12 17:16 GMT

ಮಣಿಪಾಲ, ಅ.12: ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟಿನಲ್ಲಿ ಅ.21ರಿಂದ 4 ವಾರಗಳ ಉಚಿತ ವಸ್ತ್ರವಿನ್ಯಾಸ ತರಬೇತಿ ಯನ್ನು ಹಮ್ಮಿ ಕೊಳ್ಳಲಾಗಿದೆ. ಸ್ವ-ಉದ್ಯೋಗ ಮಾಡಲು ಆಸಕ್ತಿ ಇರುವ ಮಹಿಳೆಯರು / ವಿದ್ಯಾಭ್ಯಾಸ ಮುಗಿಸಿರುವ ಅಭ್ಯರ್ಥಿಗಳು ಈ ತರಬೇತಿಯ ಸದುಪಯೋ ವನ್ನು ಪಡೆದುಕೊಳ್ಳಬಹುದು.

ಆಸಕ್ತ ಶಿಬಿರಾರ್ಥಿಗಳು ತಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಮತ್ತು ವಿದ್ಯಾರ್ಹತೆಯನ್ನು ಬಿಳಿ ಹಾಳೆಯಲ್ಲಿ ಬರೆದು ಆ.16ರೊಳಗೆ ಭಾರತೀಯ ವಿಕಾಸ ಟ್ರಸ್ಟ್, ಅನಂತ, ಪೆರಂಪಳ್ಳಿ, ಅಂಬಾಗಿಲು ರಸ್ತೆ, ಕುಂಜಿಬೆಟ್ಟು ಅಂಚೆ, ಉಡುಪಿ - 576102, ಈ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿಕೊಡಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News