ಬ್ರಿಟಿಷರ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಸಾವರ್ಕರ್ ಗೆ ಗಾಂಧೀಜಿ ಹೇಳಿದ್ದರು: ರಾಜನಾಥ್ ಸಿಂಗ್

Update: 2021-10-13 05:54 GMT

ಹೊಸದಿಲ್ಲಿ: ಮಹಾತ್ಮಾ ಗಾಂಧಿಯವರ ಸಲಹೆಯ ಮೇರೆಗೆ ಹಿಂದುತ್ವವಾದಿ ವೀರ್ ಸಾವರ್ಕರ್ ಅವರು ಅಂಡಮಾನ್ ಜೈಲಿನಲ್ಲಿ ಬಂಧನದಲ್ಲಿದ್ದಾಗ ಬ್ರಿಟಿಷರಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದರು. ಆದರೆ ಸ್ವಾತಂತ್ರ್ಯ ಹೋರಾಟಕ್ಕೆ ಅವರ ಕೊಡುಗೆಯನ್ನು ಕೆಲವು ಸಿದ್ಧಾಂತಗಳನ್ನು ಅನುಸರಿಸುವವರು ನಿಂದಿಸಿದರು ಹಾಗೂ ಅದನ್ನು ಇನ್ನು ಮುಂದೆ ಸಹಿಸುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಹೇಳಿದರು.

ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಸಾವರ್ಕರ್ ಕುರಿತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಸಿಂಗ್ ಮಾತನಾಡುತ್ತಿದ್ದರು. ಸಮಾರಂಭದಲ್ಲಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾಗವಹಿಸಿದ್ದರು.

"ಸಾವರ್ಕರ್ ವಿರುದ್ಧ ಸಾಕಷ್ಟು ಸುಳ್ಳುಗಳನ್ನು ಹರಡಲಾಯಿತು. ಅವರು ಬ್ರಿಟಿಷ್ ಸರಕಾರದ ಮುಂದೆ ಹಲವು ಬಾರಿ ಕ್ಷಮಾದಾನ ಅರ್ಜಿಗಳನ್ನು ಸಲ್ಲಿಸಿದ್ದರು ಎಂದು ಪದೇ ಪದೇ ಹೇಳಲಾಯಿತು. ಸತ್ಯವೆಂದರೆ ಅವರು ತನ್ನ ಬಿಡುಗಡೆಗಾಗಿ ಈ ಅರ್ಜಿಗಳನ್ನು ಸಲ್ಲಿಸಿಲ್ಲ. ಸಾಮಾನ್ಯವಾಗಿ ಕೈದಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕಿದೆ. ಮಹಾತ್ಮಾ ಗಾಂಧಿಯವರ ಸಲಹೆಯ ಮೇರೆಗೆ ಅವರು ಕ್ಷಮಾದಾನ ಅರ್ಜಿ ಸಲ್ಲಿಸಿದ್ದರು. ಸಾವರ್ಕರ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಮಹಾತ್ಮಾ ಗಾಂಧಿಯವರು ಮನವಿ ಮಾಡಿದ್ದರು. ನಾವು ಸ್ವಾತಂತ್ರ್ಯಕ್ಕಾಗಿ ಹೇಗೆ ಚಳುವಳಿಯನ್ನು ಶಾಂತಿಯುತವಾಗಿ ನಡೆಸಿದ್ದೇವೆಯೋ  ಹಾಗೆಯೇ ಸಾವರ್ಕರ್ ಕೂಡ ಮಾಡುತ್ತಾರೆ ಎಂದು ಗಾಂಧಿ ಹೇಳಿದ್ದರು'' ಎಂದು ಸಿಂಗ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News