ಬೆಂಗಳೂರು: ಅನುಮಾನಾಸ್ಪದ ಸೂಟ್‌ಕೇಸ್ ಪತ್ತೆ, ಸ್ಥಳೀಯರಲ್ಲಿ ಆತಂಕ
Update: 2021-10-13 15:21 IST
photo: twitter@KiranParashar21
ಬೆಂಗಳೂರು: ದ್ವಿಚಕ್ರವಾಹನದಲ್ಲಿ ಅನುಮಾನಾಸ್ಪದ ಸೂಟ್‌ಕೇಸ್ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ನಗರದ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವೊಂದರಲ್ಲಿ ಸೂಟ್‌ಕೇಸ್ ಪತ್ತೆಯಾಗಿದ್ದು, ಆತಂಕಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.