ಕುದ್ರೋಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ
Update: 2021-10-13 17:52 IST
ಮಂಗಳೂರು : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಡುಪಿ ಕಾರ್ಯಕ್ರಮದ ಬಳಿಕ ಇಂದು ಸಂಜೆ
ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ, ಮಂಗಳೂರು ದಸರಾ ಕಾರ್ಯಕ್ರಮ ವೀಕ್ಷಿಸಿದರು.
ಮಾಜಿ ಕೇಂದ್ರ ವಿತ್ತ ಸಚಿವ ಹಾಗೂ ಶ್ರೀ ಕ್ಷೇತ್ರ ಕುದ್ರೋಳಿಯ ನವೀಕರಣದ ರೂವಾರಿ, ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರು ಈ ಸಂದರ್ಭ ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಉಮಾನಾಥ ಕೊಟ್ಯಾನ್, ಮೇಯರ್ ಪ್ರೇಮಾನಂದ ಶೆಟ್ಟಿ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಶ್ರೀ ಕುದ್ರೋಳಿ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಎಚ್.ಎಸ್. ಸಾಯಿರಾಮ್, ಕಾರ್ಯದರ್ಶಿ ಪದ್ಮರಾಜ್ ಮೊದಲಾದವರು ಉಪಸ್ಥಿತರಿದ್ದರು.