ಮಾಧವ ನಗರ-ಬಂಟಕಲ್ಲು ರಸ್ತೆ ಅಭಿವೃದ್ಧಿಗೆ ಸಿಎಂ ಶಂಕುಸ್ಥಾಪನೆ
Update: 2021-10-13 20:36 IST
ಉಡುಪಿ, ಅ.13: ಕಾಪು ತಾಲೂಕಿನ ಮಾಧವ ನಗರದಿಂದ ಬಂಟಕಲ್ಲು ರಸ್ತೆ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಕುಂತಲ ನಗರದಲ್ಲಿ ಶಂಕು ಸ್ಥಾಪನೆ ನೆರವೇರಿಸಿದರು.
ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಒಟ್ಟು 6.36 ಕಿ.ಮೀ ಉದ್ದದ ರಸ್ತೆಯನ್ನು 4.6 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡುವ ಯೋಜನೆ ಇದಾಗಿದೆ. ಈ ಸಂದರ್ಭದಲ್ಲಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ವಿ.ಸುನೀಲ್ ಕುಮಾರ್, ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು