ಹಾನಗಲ್ ಉಪಚುನಾವಣೆ: ಉಸ್ತುವಾರಿಯಾಗಿ ಹರೀಶ್ ಕುಮಾರ್, ಯು.ಟಿ. ಖಾದರ್
Update: 2021-10-13 22:36 IST
ಮಂಗಳೂರು: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಹಾಗೂ ಶಾಸಕ ಯು.ಟಿ. ಖಾದರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ನೇಮಕ ಮಾಡಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಉಸ್ತುವಾರಿಗಳ ತಂಡವನ್ನು ನಿಯೋಜಿಸಲಾಗಿದೆ.