ದಲಿತ ವ್ಯಕ್ತಿಯ ಥಳಿಸಿ ಹತ್ಯೆ: ತ್ವರಿತ ಕ್ರಮಕ್ಕೆ ಜಿಗ್ನೇಶ್ ಮೇವಾನಿ ರಾಜಸ್ಥಾನ ಸರಕಾರಕ್ಕೆ ಆಗ್ರಹ

Update: 2021-10-13 18:22 GMT

ಜೈಪುರ, ಅ. 13: ಹನುಮಾನಗಢ ಜಿಲ್ಲೆಯಲ್ಲಿ ಕಳೆದ ವಾರ ದಲಿತ ವ್ಯಕ್ತಿಯನ್ನು ಥಳಿಸಿ ಹತ್ಯೆಗೈದ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಮಂಗಳವಾರ ಆಗ್ರಹಿಸಿದ್ದಾರೆ.

ಮಹಿಳೆಯೊಂದಿಗಿನ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ದಲಿತ ವ್ಯಕ್ತಿಯನ್ನು ಥಳಿಸಿ ಹತ್ಯೆಗೈಯಲಾಗಿದೆ ಎಂದು ಹೇಳಲಾಗುತ್ತಿದೆ. ಮಹಿಳೆಯ ಪತಿ ಹಾಗೂ ಇತರ 10 ಮಂದಿ ಅಕ್ಟೋಬರ್ 7ರಂದು ದಲಿತ ವ್ಯಕ್ತಿಯನ್ನು ಅಪಹರಿಸಿದ್ದರು. ಅವರಿಗೆ ದೊಣ್ಣೆಯಿಂದ ಥಳಿಸಿ ಮನೆಯ ಹೊರಗೆ ಬಿಟ್ಟು ಹೋಗಿದ್ದರು. ಕುಟುಂಬಿಕರು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಅವರು ಮೃತಪಟ್ಟಿದ್ದರು. ಜಿಗ್ನೇಶ್ ಮೇವಾನಿ ಅವರು ಘಟನೆಗೆ ಸಂಬಂಧಿಸಿದ ವೀಡಿಯೊವನ್ನು ಮಂಗಳವಾರ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದರು.

 ‘‘ಬಡ ದಲಿತ ವ್ಯಕ್ತಿಯನ್ನು ಥಳಿಸಿ ಬರ್ಬರವಾಗಿ ಹತ್ಯೆಗೈದ ಮನಕಲಕುವ ಘಟನೆ ರಾಜಸ್ಥಾನದಿಂದ ವರದಿಯಾಗಿದೆ’’ ಎಂದು ಜಿಗ್ನೇಶ್ ಮೇವಾನಿ ಹೇಳಿದ್ದಾರೆ. ‘‘ಆರೋಪಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಇದನ್ನು ಆದ್ಯತೆಯಾಗಿ ಪರಿಗಣಿಸುವಂತೆ ನಾನು ರಾಜಸ್ಥಾನ ಸರಕಾರದಲ್ಲಿ ಮನವಿ ಮಾಡುತ್ತೇನೆ. ಇಂತಹ ಬರ್ಬರತೆಗೆ ಎಲ್ಲಿಯೂ ಅವಕಾಶ ನೀಡಬಾರದು’’ ಎಂದು ಜಿಗ್ನೇಶ್ ಮೇವಾನಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News