ಉಡುಪಿ ಜಿಲ್ಲೆಯಲ್ಲಿ 7ಕ್ಕಿಳಿದ ಕೋವಿಡ್ ಪಾಸಿಟಿವ್ ಸಂಖ್ಯೆ
ಉಡುಪಿ, ಅ.14: ಜಿಲ್ಲೆಯಲ್ಲಿ ಗುರುವಾರ ಕೋವಿಡ್-19 ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 7ಕ್ಕಿಳಿದಿದೆ. ದಿನದಲ್ಲಿ 16 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದರೆ, 72 ಮಂದಿ ಇನ್ನೂ ಸೋಂಕಿಗೆ ಸಕ್ರಿಯರಾಗಿದ್ದು ಚಿಕಿತ್ಸೆಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ದಿನದಲ್ಲಿ ಸೋಂಕು ದೃಢಪಟ್ಟ 7 ಮಂದಿಯಲ್ಲಿ ನಾಲ್ವರು ಪುರುಷರು ಹಾಗೂ ಮೂವರು ಮಹಿಳೆಯರು ಸೇರಿದ್ದಾರೆ. ಸೋಂಕಿತರಲ್ಲಿ ಮೂವರು ಉಡುಪಿ ತಾಲೂಕಿನವರಾದರೆ, ತಲಾ ಇಬ್ಬರು ಕುಂದಾಪುರ ಹಾಗೂ ಕಾರ್ಕಳ ತಾಲೂಕಿ ನವರು. ಇವರಲ್ಲಿ ಇಬ್ಬರಿಗೆ ಕೋವಿಡ್ ಆಸ್ಪತ್ರೆ ಹಾಗೂ ಉಳಿದವರಿಗೆ ಮನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ಗೆ ಯಾರೂ ಬಲಿಯಾಗಿಲ್ಲ.
ಇಂದು 16 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 76,004ಕ್ಕೇರಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,551ಕ್ಕೇರಿದೆ.