ಮೈಸೂರು ದಸರಾ; ವಿದ್ಯುತ್ ದೀಪಾಲಂಕಾರ 9 ದಿನಗಳವರೆಗೆ ವಿಸ್ತರಣೆ: ಮುಖ್ಯಮಂತ್ರಿ ಬೊಮ್ಮಾಯಿ

Update: 2021-10-15 11:30 GMT

ಮೈಸೂರು, ಅ.15: ವಿದ್ಯುತ್ ದೀಪಾಲಂಕಾರವನ್ನು ಒಂಬತ್ತು  ದಿನಗಳವರೆಗೆ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. 

  ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಶುಕ್ರವಾರ   ನೀಡಿದ ಸಂದರ್ಭದಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದರು.

ನಾಡಿನ ವಿವಿಧ ಕಡೆಗಳಿಂದ ಪ್ರವಾಸಿಗರು ದೊಡ್ಡ ಪ್ರಮಾಣದಲ್ಲಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಜನಪ್ರತಿನಿಧಿಗಳು ಮತ್ತು ಜನತೆಯ ಬೇಡಿಕೆಯ  ಮೇರೆಗೆ ವಿದ್ಯುತ್ ದೀಪಾಲಂಕಾರವನ್ನು ವಿಸ್ತರಿಸುತ್ತಿರುವುದಾಗಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News