×
Ad

ಗುರುಪುರ ಬಡಕರೆಯಲ್ಲಿ ಚಿರತೆ ಹಾವಳಿ ?

Update: 2021-10-15 17:17 IST

ಮಂಗಳೂರು, ಅ.15: ಗುರುಪುರ ಗ್ರಾಪಂ ವ್ಯಾಪ್ತಿಯ ಬಡಕರೆ, ನಡುಗುಡ್ಡೆ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಕಂಡು ಬಂದಿದೆ ಎನ್ನಲಾಗಿದ್ದು, ಗ್ರಾಮಸ್ಥರು ಆತಂಕಿತರಾಗಿದ್ದಾರೆ.

ಈ ಪ್ರದೇಶದಲ್ಲಿ ಚಿರತೆ ಹೆಜ್ಜೆ ಗುರುತು ಕಂಡು ಬಂದಿರುವ ಮಧ್ಯೆಯೇ ಬಡಕರೆಯ ಶ್ರೀ ಕೋರ್ದಬ್ಬು ದೈವಸ್ಥಾನದ ಬಳಿಯ ಮನೆಯೊಂದರ ಬೆಕ್ಕು ಹಾಗೂ ಮತ್ತೊಂದು ಮನೆಯ ನಾಯಿ ನಾಪತ್ತೆಯಾಗಿದೆ. ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖಾಧಿಕಾರಿಗಳ ಗಮನ ಸೆಳೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News