×
Ad

ಪ್ರಮೋದ್ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Update: 2021-10-15 20:00 IST

ಉಡುಪಿ, ಅ.15: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹುಟ್ಟುಹಬ್ಬದ ಪ್ರಯುಕ್ತ ಉಡುಪಿಯ ಪ್ರಮೋದ್ ಮಧ್ವರಾಜ್ ಅಭಿಮಾನಿ ಬಳಗ ಉಡುಪಿ ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವೊಂದನ್ನು ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಅ.17ರ ರವಿವಾರ ಬೆಳಗ್ಗೆ 9 ಗಂಟೆಯಿಂದ ಅಪರಾಹ್ನ 1 ಗಂಟೆಯವರೆಗೆ ಹಮ್ಮಿಕೊಂಡಿದೆ.

ಸಭಾ ಕಾರ್ಯಕ್ರಮವನ್ನು ಬೆಳಗ್ಗೆ 10:30ಕ್ಕೆ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ತುಳುಕೂಟದ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜನಾರ್ದನ ತೋನ್ಸೆ ಭಾಗವಹಿಸಲಿದ್ದಾರೆ. ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನರ ಹೇರೂರು ಉಪಸ್ಥಿತರಿರುವರು.

ರಕ್ತದಾನಿಗಳು ಮತ್ತು ಪ್ರಮೋದ್ ಮಧ್ವರಾಜ್‌ರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಮೋದ್ ಮಧ್ವರಾಜ್ ಅಭಿಮಾನಿ ಬಳಗ ವಿನಂತಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News