ಬಿ.ಎಲ್.ಸಂತೋಷ್-ಯಡಿಯೂರಪ್ಪ ಸಮಾಲೋಚನೆ

Update: 2021-10-15 15:01 GMT

ಬೆಂಗಳೂರು, ಅ. 15: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪನವರು ರಾಜೀನಾಮೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಯಡಿಯೂರಪ್ಪನವರನ್ನು ಖುದ್ದು ಭೇಟಿ ಮಾಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಶುಕ್ರವಾರ ಇಲ್ಲಿನ ಯಡಿಯೂರಪ್ಪ ನಿವಾಸಕ್ಕೆ ಖುದ್ದು ಭೇಟಿ ನೀಡಿದ ಸಂತೋಷ್, ಪ್ರಸಕ್ತ ರಾಜಕೀಯ ವಿದ್ಯಮಾನ ಮತ್ತು ಈ ತಿಂಗಳ ಅಂತ್ಯಕ್ಕೆ ನಡೆಯಲಿರುವ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ ಸಂಬಂಧ ಉಭಯ ನಾಯಕರು ಸಮಾಲೋಚನೆ ನಡೆಸಿದ್ದಾರೆಂದು ತಿಳಿದು ಬಂದಿದೆ. ಸುಮಾರು ಅರ್ಧಗಂಟೆಗಳಿಗೂ ಹೆಚ್ಚು ಕಾಲ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

ನಾಡಹಬ್ಬ ದಸರಾ ಹಾಗೂ ವಿಜಯದಶಮಿ ಹಿನ್ನೆಲೆಯಲ್ಲಿ `ಬನ್ನಿ' ಬಂಗಾರವಾಗಲಿ ಎಂಬ ಆಶಯದೊಂದಿಗೆ ಉಭಯ ನಾಯಕರು `ಬನ್ನಿ' ಹಂಚಿಕೊಂಡು, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು ಎಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News