ಉಡುಪಿ: ಯಾಗ ಶಾಲೆಗೆ ಪೇಜಾವರ ಶ್ರೀಗಳಿಂದ ಶಿಲಾನ್ಯಾಸ

Update: 2021-10-15 15:45 GMT

ಉಡುಪಿ, ಅ.15: ಜೀರ್ಣೋದ್ದಾರಗೊಳ್ಳುತ್ತಿರುವ ಕಡಿಯಾಳಿಯ ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ಯಾಗ ಶಾಲೆಗೆ ಶಿಲಾನ್ಯಾಸ ಕಾರ್ಯಕ್ರಮ ಇಂದು ದೇವಸ್ಥಾನದ ವಠಾರದಲ್ಲಿ ನೆರವೇರಿತು.

ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥರು ಶಿಲಾನ್ಯಾಸ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಕೆ.ರಘುಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ಬಳಿಕ ಸಭಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಮಂಡಳಿ ಅಧ್ಯಕ್ಷ ಡಾ.ರವಿರಾಜ ವಿ. ಆಚಾರ್ಯ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ನಾಗೇಶ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಿಣಿ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರೂ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News