ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನು ಅರಿವು ಮೂಡಿಸಿ : ನ್ಯಾಯಾಧೀಶೆ ಶರ್ಮಿಳಾ

Update: 2021-10-15 15:51 GMT

ಉಡುಪಿ, ಅ.15:ಉಚಿತ ಕಾನೂನು ನೆರವನ್ನು ಪಡೆಯಲು ಅರ್ಹರಾದ ವ್ಯಕ್ತಿಗಳನ್ನು ಗುರುತಿಸಿ ಕಾನೂನಾತ್ಮಕ ಸೇವೆಯನ್ನು ಉಚಿತವಾಗಿ ನೀಡಬೇಕು. ಲೋಕ ಅದಾಲತ್ ಏರ್ಪಡಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ ಗೊಳಿಸಿ, ಕಾನೂನು ಅರಿವು ಮೂಡಿಸಬೇಕು ಎಂದು ಉಡುಪಿ ಜಿಲ್ಲಾ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ಶರ್ಮಿಳಾ ಎಸ್. ಹೇಳಿದ್ದಾರೆ.

ನಗರದ ಕಡಿಯಾಳಿಯಲ್ಲಿರುವ ಯು. ಕಮಲಾ ಬಾಯಿ ಪ್ರೌಢಶಾಲೆಯಲ್ಲಿ ನಡೆದ ಉಡುಪಿ ವಲಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯರಾದ ಜಯ ವಾಸು ಪೂಜಾರಿ ಕಾನೂನಿನ ಕುರಿತು ಮಾಹಿತಿಯನ್ನು ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಶಿವಕುಮಾರ್ ಕಣ್ಣನ್, ಸುಮಿತ್ ಅಣ್ಣಾಮಲೈ, ಪ್ರವೀಣ್ ಭಾವಹಿಸಿದ್ದರು.

ಇದೇ ಸಂದರ್ಭದಲ್ಲಿ ಸೇವೆಯಿಂದ ನಿವೃತ್ತರಾದ ಮಲ್ಲಿಕ, ಡೊಮಿಯನ್ ನೊರೋನ್ಹ, ರಮೇಶ್ ದೇವಾಡಿಗರನ್ನು ಗೌರವಿಸಲಾಯಿತು.

ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ವಿಜಯೇಂದ್ರ ವಸಂತ್, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ರಘನಾಥ್, ಪರಿವೀಕ್ಷಣಾಧಿಕಾರಿ ಗೋಪಾಲ್ ಶೆಟ್ಟಿ, ಮುಖ್ಯ ಶಿಕ್ಷಕ ಗಣೇಶಮೂರ್ತಿ ಹೆಬ್ಬಾರ್, ಸುದರ್ಶನ್ ನಾಯಕ್, ಸತೀಶ ಸಾಲ್ಯಾನ್ ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ಸತ್ಯಸಾಯಿ ಪ್ರಸಾದ್ ಸ್ವಾಗತಿಸಿ, ಸೋಮಶೇಖರ್ ಕಾರ್ಯಕ್ರಮ ನಿರೂಪಿಸಿದರು. ಕಲಾವತಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News