ಅ.25ರಂದು ಸಾರ್ವಜನಿಕರ ಅಹವಾಲು ಸಭೆ

Update: 2021-10-15 15:53 GMT

ಉಡುಪಿ, ಅ.15: ಕಾರ್ಕಳ ತಾಲೂಕು ಮರ್ಣೆ ಗ್ರಾಮದಲ್ಲಿ ಸಾಮಾಜಿಕ ಅರಣ್ಯ ವತಿಯಿಂದ ಬೆಳೆಸಿದ ಅಕೇಶಿಯಾ ನೆಡುತೋಪಿನಲ್ಲಿರುವ ಒಟ್ಟು 636 ಮರಗಳನ್ನು ಕಡಿಯಲು ಉದ್ದೇಶಿಸಿದ್ದು, ಈ ಕುರಿತಂತೆ ಸಾರ್ವಜನಿಕರ ಅಹವಾಲು ಸಭೆಯನ್ನು ಅ.25ರಂದು ಬೆಳಗ್ಗೆ 11 ಗಂಟೆಗೆ ಕಾರ್ಕಳ ವಲಯದ ವಲಯ ಅರಣ್ಯಾಧಿಕಾರಿ ಕ ಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ.

ಈ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ ಖುದ್ದಾಗಿ ಸಭೆಯಲ್ಲಿ ಹಾಜರಾಗಿ ಆಕ್ಷೇಪಣೆಯನ್ನು ಸಲ್ಲಿಸಬಹುದು ಅಥವಾ ಈ ದಿನಾಂಕದ ಒಳಗಾಗಿ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ವಿಭಾಗ, ಕುಂದಾಪುರ ಇವರಿಗೆ ಲಿಖಿತರೂಪದಲ್ಲಿ ಆಕ್ಷೇಪಣೆಯನ್ನು ಸಲ್ಲಿಸಬಹುದು.

ಇಮೇಲ್ - kpurforest@yahoo.com-ಅಥವಾ ಅಂಚೆ ವಿಳಾಸ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ, ಕುಂದಾಪುರ -576201 ಇವರಿಗೆ ಸಹ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News