×
Ad

ರಾಜಸ್ಥಾನ: ದುರ್ಗಾ ದೇವಿ ವಿಗ್ರಹ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ನಾಲ್ವರು ಯುವಕರು ಸಾವು

Update: 2021-10-15 23:22 IST
ಸಾಂದರ್ಭಿಕ ಚಿತ್ರ 

ಹೊಸದಿಲ್ಲಿ, ಅ. 15: ದುರ್ಗಾ ದೇವಿಯ ವಿಗ್ರಹ ವಿಸರ್ಜನೆ ಸಂದರ್ಭ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ರಾಜಸ್ಥಾನದ ಧೋಲ್ಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಭೂತೇಶ್ವರ ದೇವಾಲಯದ ಸಮೀಪದ ಪಾರ್ವತಿ ನದಿಯಲ್ಲಿ ದುರ್ಗಾದೇವಿಯ ವಿಗ್ರಹ ವಿಸರ್ಜನೆ ಸಂದರ್ಭ ಆಗ್ರಾ ಮೂಲದ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ‌

ನೀರು ಪಾಲಾದವರನ್ನು ಜಯಪ್ರಕಾಶ್ (22), ಶ್ರೀಕೃಷ್ಣ (23), ರಾಜೇಶ್ (26) ಹಾಗೂ ಅವರ ಸಹೋದರ ರಣವೀರ್ ಸಿಂಗ್ (24) ಎಂದು ಗುರುತಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹಗಳನ್ನು ಕುಟುಂಬಿಕರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News