ಬೆಂಗಳೂರು; ಕೋವಿಡ್ ನಿಯಮ ಪಾಲಿಸದಿದ್ದರೆ ಚಿತ್ರಮಂದಿರ ಬಂದ್

Update: 2021-10-15 19:08 GMT

ಬೆಂಗಳೂರು, ಅ.15: ರಾಜ್ಯ ಸರಕಾರವು ಚಿತ್ರಮಂದಿಗಳಲ್ಲಿ ಶೇ.100 ರಷ್ಟು ತೆರವಿಗೆ ಅವಕಾಶ ನೀಡಲಾಗಿದೆ. ಆದರೂ ನಗರದ ಚಿತ್ರಮಂದಿರಗಳಲ್ಲಿ ಕೋವಿಡ್ ನಿಯಮ ಪಾಲನೆ ಮಾಡುವುದು ಅತ್ಯಗತ್ಯವಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿದ ಚಿತ್ರಮಂದಿರಗಳಲ್ಲಿ ಮೊದಲೆರಡು ಬಾರಿ ನಿಯಮ ಪಾಲನೆಯ ಬಗ್ಗೆ ಎಚ್ಚರಿಕೆ ನೀಡಲಾಗುವುದು. ಆದರೂ ಕೋವಿಡ್ ನಿಯಮ ಪಾಲಿಸದಿದ್ದರೆ ಚಿತ್ರಮಂದಿರಗಳನ್ನು ಮುಚ್ಚಲಾಗುವುದು ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಎಚ್ಚರಿಕೆ ನೀಡಿದ್ದಾರೆ.

ಸ್ಟಾರ್ ನಟರ ಸಿನಿಮಾಗಳು ಬಿಡುಗಡೆಯಾದ ಹಿನ್ನೆಲೆಯಲ್ಲಿ ಜನರು ಕೋವಿಡ್ ನಿಯಮಗಳ ಉಲ್ಲಂಘನೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಚಿತ್ರಮಂದಿರಗಳು ಕೋವಿಡ್ ನಿಯಮಗಳ ಕಡೆಗೆ ಗಮನಿಸಬೇಕು. ಮಾಸ್ಕ್, ಸುರಕ್ಷಿತ ಅಂತರ ಕಡ್ಡಾಯವಾಗಿದೆ. ನಿಯಮಗಳನ್ನು ಪಾಲಿಸದಿದ್ದರೆ ಚಿತ್ರಮಂದಿರಗಳನ್ನು ಬಂದ್ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News