ಅರ್ಜಿ ಆಹ್ವಾನ

Update: 2021-10-16 13:52 GMT

ಉಡುಪಿ, ಅ.16: ಉಡುಪಿ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ ಮತ್ತು ಪ.ಪಂಗಡದ ಅರ್ಹ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರುಗಳು ವಿದ್ಯಾರ್ಥಿಗಳ ದಾಖಲಾತಿಗಳೊಂದಿಗೆ ನೇರವಾಗಿ ಇಲಾಖೆ ವೆಬ್‌ಸೈಟ್-https://ssp.karnataka.gov.in - ಅಥವಾ - www.sw.kar.nic.in-ನಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2528884ನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News