ವಾಯವ್ಯ ಶಿಕ್ಷಕರ ಮತಕ್ಷೇತ್ರ: ನ.6ರವರೆಗೆ ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಅವಕಾಶ

Update: 2021-10-16 13:56 GMT

ಬೆಳಗಾವಿ, ಅ.16: ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕರ ಹಾಗೂ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಲು ಅರ್ಹರಿರುವ ವ್ಯಕ್ತಿಗಳು ತಮ್ಮ ಹೆಸರನ್ನು ಇದುವರೆಗೂ ಸೇರಿಸದೆ ಇದ್ದಲ್ಲಿ ನಿಗದಿತ ನಮೂನೆ 19ರಲ್ಲಿ ನವೆಂಬರ್ 6ರ ಒಳಗಾಗಿ ಅಥವಾ ಅದಕ್ಕೂ ಮುಂಚೆ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ವಿವರಗಳು ರಾಜ್ಯದ ಮುಖ್ಯ ಚುನಾವಣಾಧಿಕಾರಿಯ ವೆಬ್‍ಸೈಟ್ ವಿಳಾಸ www.ceokarnataka.kar.nic. in ರಲ್ಲಿ ಲಭ್ಯವಿದೆ ಎಂದು ಎಂದು ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News