​ಮಲ್ಪೆ ಸಮುದ್ರದಲ್ಲಿ ಮುಳುಗಿ ಪ್ರವಾಸಿಗ ಮೃತ್ಯು

Update: 2021-10-16 15:57 GMT

ಮಲ್ಪೆ, ಅ.16: ಮಲ್ಪೆ ಬೀಚ್‌ನ ಸಮುದ್ರದಲ್ಲಿ ಆಡುತ್ತಿದ್ದ ಪ್ರವಾಸಿಗರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಅ.15ರಂದು ಸಂಜೆ ವೇಳೆ ನಡೆದಿದೆ.

ಮೃತರನ್ನು ಮಂಡ್ಯದ ವಿಶ್ವಾಸ್(23) ಎಂದು ಗುರುತಿಸಲಾಗಿದೆ. ಇವರು ತನ್ನ ಸ್ನೇಹಿತರ ಜೊತೆ ಮಲ್ಪೆ ಬೀಚ್‌ಗೆ ಪ್ರವಾಸ ಬಂದಿದ್ದು, ಅಲ್ಲಿ ಎಲ್ಲ ಸೇರಿ ನೀರಿನಲ್ಲಿ ಆಡುತ್ತಿದ್ದಾಗ ವಿಶ್ವಾಸ್ ಅಲೆಗಳಿಗೆ ಸಿಲುಕಿ ನೀರಿನಲ್ಲಿ ಮುಳುಗಿ ಮೃತಪಟ್ಟರು. ನಂತರ ಮಲ್ಪೆ ಬೀಚ್ನ ಲೈಪ್ ಗಾರ್ಡ್‌ನವರು ಬೋಟಿನಲ್ಲಿ ತೆರಳಿ ಮೃತದೇಹವನ್ನು ತೀರಕ್ಕೆ ತಂದರು.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News