ಬಾಲ್ಯ ವಿವಾಹ ನಿಷೇಧ ಕುರಿತು ಕಾನೂನು ಅರಿವು
ಉಡುಪಿ, ಅ.17: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಆಚರಣೆಯ ಅಂಗವಾಗಿ ಬಾಲ್ಯ ವಿವಾಹ ನಿಷೇದಕ್ಕೆ ಸಂಬಂಧಪಟ್ಟ ಇತ್ತೀಚಿನ ಕಾನೂನುಗಳಿಗೆ ಸಂಬಂಧಿಸಿದ ಕಾನೂನು ಅರಿವು ನೆರವು ಕಾರ್ಯಕ್ರಮವು ಬೀಡಿನಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ ಶನಿವಾರ ಜರಗಿತು.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಉದ್ಘಾಟಿಸಿ ದರು. ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲೆ ಸೆಲೆಸ್ತಿನ್ ಹಾಗೂ ನಿವೃತ್ತ ಶಿಶು ಅಭಿವೃದ್ಧಿ ಯೋಜನಾಧಿಕಾರಿ ದಾನಂದ ನಾಯಕ್ ಮಾಹಿತಿ ನೀಡಿದರು.
ವಕೀಲೆ ಹಾಗೂ ಕಾನೂನು ಸಲಹೆಗಾರ್ತಿ ಸ್ಮಿತಾ ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ನಾಯ್ಕ್ ಸ್ವಾಗತಿಸಿ ದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮಹೇಶ್ ಕಾರ್ಯಕ್ರಮ ನಿರೂಪಿಸಿದರು, ಸುರಕ್ಷಾ ವಂದಿಸಿದರು.