ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಮುಖ್ಯಮಂತ್ರಿ ಬೊಮ್ಮಾಯಿ ವಿಶ್ವಾಸ

Update: 2021-10-17 11:38 GMT

ಹುಬ್ಬಳ್ಳಿ, ಅ. 17: `ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಉಪ ಚುನಾವಣೆಯ ಪ್ರಚಾರ ಕಾರ್ಯದಲ್ಲಿಂದು ಪಾಲ್ಗೊಂಡಿದ್ದು, ಸಿಂಧಗಿ ಕ್ಷೇತ್ರದಲ್ಲಿಯೂ ಪ್ರಚಾರ ಮಾಡುತ್ತೇನೆ. ಈ ಎರಡೂ ಕ್ಷೇತ್ರಗಳಲ್ಲಿ ಹೆಚ್ಚಿನ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವ ಸಂಪೂರ್ಣ ವಿಶ್ವಾಸ ತಮಗಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದ್ದಾರೆ.

ರವಿವಾರ ಇಲ್ಲಿನ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಮಾಡಿರುವ ಆರೋಪದಲ್ಲಿ ಹುರುಳಿಲ್ಲ. ಸಂಗೂರು ಸಕ್ಕರೆ ಕಾರ್ಖಾನೆಗೆ ತನ್ನದೇ ಆದ ಇತಿಹಾಸವಿದೆ. ಆ ಕಾರ್ಖಾನೆ ಮುಚ್ಚುವಲ್ಲಿ ಕಾಂಗ್ರೆಸ್ ಪಕ್ಷದವರ ಕೊಡುಗೆ ಇದೆ. ಪರಿಸ್ಥಿತಿಯ ಪರಿಶೀಲನೆ ಮಾಡಿ ರೈತರ ಕಬ್ಬು ಅರೆಯುವಂತೆ ಮಾಡಿದ್ದು ಬಿಜೆಪಿ ಸರಕಾರ' ಎಂದು ತಿರುಗೇಟು ನೀಡಿದರು. 

`2,400 ಕೋಟಿ ರೂ.ಹಣವನ್ನು ಹಾನಗಲ್ ಕ್ಷೇತ್ರಕ್ಕೆ ನೀಡಿದ್ದೇನೆ. ಹಾನಗಲ್ ಅಳಿಯ ಸಿಎಂ ಬಸವರಾಜ ಡೋಣೂರ ಬೊಮ್ಮಾಯಿ ಏನು ಕೊಟ್ಟಿದ್ದಾರೆಂಬ ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರ ನೀಡಿದ ಬಸವರಾಜ ಬೊಮ್ಮಾಯಿ, 2,400 ಕೋಟಿ ರೂ. ಎಲ್ಲಿದೆ? ಎಲ್ಲಿಂದ ಕೊಟ್ಟಿದ್ದಾರೆ ಎಂದು ತೋರಿಸಲಿ ಎಂದಿದ್ದಾರೆ. ಇದಕ್ಕೆ ಸೂಕ್ತ ಉತ್ತರ ನೀಡಲಾಗುವುದು ಎಂದು ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News