ಪೆಟ್ರೋಲ್ ಮೇಲಿನ ತೆರಿಗೆ ಇಳಿಕೆ: ಆರ್ಥಿಕ ಪರಿಸ್ಥಿತಿ ಪರಿಶೀಲಿಸಿ ಕ್ರಮ; ಸಿಎಂ ಬೊಮ್ಮಾಯಿ

Update: 2021-10-17 12:43 GMT

ಹುಬ್ಬಳ್ಳಿ, ಅ. 17: `ರಾಜ್ಯದಲ್ಲಿ ಪೆಟ್ರೋಲ್ ಮೇಲಿನ ತೆರಿಗೆ ಇಳಿಕೆ ಆರ್ಥಿಕತೆಯನ್ನು ಅವಲಂಬಿಸಿದ್ದು, ಉಪ ಚುನಾವಣೆ ನಂತರ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ರವಿವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗಿದ್ದರೆ, ಪೆಟ್ರೋಲ್ ಮೇಲಿನ ತೆರಿಗೆ ಇಳಿಕೆಗೆ ಅವಕಾಶಗಳಿವೆ. ಹೀಗಾಗಿ ಆರ್ಥಿಕ ಸ್ಥಿತಿಯನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಪ್ರಕಟಿಸಲಾಗುವುದು ಎಂದು ಹೇಳಿದರು.

`2,400 ಕೋಟಿ ರೂ.ಹಣವನ್ನು ಹಾನಗಲ್ ಕ್ಷೇತ್ರಕ್ಕೆ ನೀಡಿದ್ದೇನೆ. ಹಾನಗಲ್ ಅಳಿಯ ಸಿಎಂ ಬಸವರಾಜ ಡೋಣೂರ ಬೊಮ್ಮಾಯಿ ಏನು ಕೊಟ್ಟಿದ್ದಾರೆಂಬ ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರ ನೀಡಿದ ಬಸವರಾಜ ಬೊಮ್ಮಾಯಿ, 2,400 ಕೋಟಿ ರೂ. ಎಲ್ಲಿದೆ? ಎಲ್ಲಿಂದ ಕೊಟ್ಟಿದ್ದಾರೆ ಎಂದು ತೋರಿಸಲಿ ಎಂದಿದ್ದಾರೆ. ಇದಕ್ಕೆ ಸೂಕ್ತ ಉತ್ತರ ನೀಡಲಾಗುವುದು'' ಎಂದು ವಿಶ್ವಾಸ ವ್ಯಕ್ತಪಡಿಸಿದದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News