×
Ad

ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ವೇದವ್ಯಾಸ್ ಕಾಮತ್ ಶಿಲಾನ್ಯಾಸ

Update: 2021-10-17 19:54 IST

ಮಂಗಳೂರು, ಅ.17: ಮಂಗಳೂರು ಮಹಾನಗರ ಪಾಲಿಕೆಯ ಬೆಂಗ್ರೆ ವಾರ್ಡ್‌ನಲ್ಲಿ ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾನು ಶಾಸಕನಾಗಿ ಆಯ್ಕೆಯಾಗಿ ಬಂದ ಮೇಲೆ ಬೆಂಗ್ರೆ ವಾರ್ಡಿನ ಆಗಿನ ಕಾರ್ಪೊರೇಟರ್ ಮೀರಾ ಕರ್ಕೇರಾ ಅವರ ಬೇಡಿಕೆಯಂತೆ ಈ ವಾರ್ಡಿನ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಒದಗಿಸಿ ದ್ದೇನೆ. ಈಗಾಗಲೇ ಎಂಆರ್‌ಪಿಎಲ್ ಸಂಸ್ಥೆಯ ಪೂರ್ಣ ಸಹಕಾರದೊಂದಿಗೆ ಬೆಂಗ್ರೆ ಪರಿಸರದಲ್ಲಿ ಅಂಗನವಾಡಿ ನಿರ್ಮಿಸಲಾಗಿದೆ ಎಂದು ಹೇಳಿದರು.

ಸದ್ಯ ಇಲ್ಲಿನ ಜನರ ಬೇಡಿಕೆಯಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸಲಾಗಿದೆ. ಮಾತ್ರವಲ್ಲದೆ, ಬೆಂಗ್ರೆ ವಾರ್ಡನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಮುಂದೆಯೂ ಅನು ದಾನ ಒದಗಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾರ್ಪೊರೇಟರ್ ಮುನೀಬ್ ಬೆಂಗ್ರೆ, ಸುರೇಂದ್ರ ಪಾಂಗಳ್, ಗಂಗಾಧರ್ ಸಾಲ್ಯಾನ್, ಲೋಕೇಶ್ ಬೆಂಗ್ರೆ, ಮೀರಾ ಕರ್ಕೇರ, ಹೇಮಚಂದ್ರ ಸಾಲ್ಯಾನ್, ಸಲೀಂ ಬೆಂಗ್ರೆ, ವಸಂತ್ ಜೆ. ಪೂಜಾರಿ, ಸ್ಥಳೀಯ ಮುಖಂಡರಾದ ಚೇತನ್ ಬೆಂಗ್ರೆ, ಮೋಹನ್ ಬೆಂಗ್ರೆ, ಹೇಮಚಂದ್ರ, ಅಂಗನವಾಡಿ ಮೇಲ್ವಿಚಾರಕಿಯರಾದ ಭವ್ಯ, ಅನುಪಮ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News