ಇಸ್ಲಾಂ, ಪ್ರವಾದಿ ಬಗ್ಗೆ ಅವಹೇಳನಾಕಾರಿ ಬರಹ: ಪ್ರೊಫೆಸರ್ ವಿರುದ್ಧ ಕ್ಯಾಂಪಸ್ ಫ್ರಂಟ್ ಪೊಲೀಸರಿಗೆ ದೂರು

Update: 2021-10-17 14:39 GMT

ಮಂಗಳೂರು, ಅ.17: ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಿಗೆ ಅನ್ವಯಗೊಂಡ ಬಿಎಡ್ ಮೂರನೇ ಸೆಮಿಸ್ಟರ್ ಮೌಲ್ಯಾಧಾರಿತ ಶಿಕ್ಷಣದ ಹೆಸರಿನಲ್ಲಿರುವ ಪಠ್ಯಪುಸ್ತಕದಲ್ಲಿ ಇಸ್ಲಾಂ ಧರ್ಮ ಮತ್ತು ಮುಸ್ಲಿಂಮರ, ಪ್ರವಾದಿ ಮುಹಮ್ಮದ್ ಕುರಿತು ಪೂರ್ವ ಗ್ರಹಪೀಡಿತ, ಅವಹೇಳನಾಕಾರಿ ಅಂಶಗಳನ್ನು ತುರುಕಿದ್ದು, ಲೇಖಕ ಬಿ.ಆರ್. ರಾಮಚಂದ್ರಯ್ಯ ವಿರುದ್ಧ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ಮಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲಾ ಸಮಿತಿಯು ಕಾವೂರು, ಬಜ್ಪೆ, ಪಾಂಡೇಶ್ವರ ಮತ್ತು ಬಂದರು ಠಾಣೆಗಳಿಗೆ ದೂರು ದಾಖಲಿಸಿಲಾಯಿತು.

ತುಮಕೂರಿನ ಕಾಲೇಜೊಂದರ ಸಹಾಯಕ ಪ್ರಾಧ್ಯಾಪಕ ಬಿ.ಆರ್. ರಾಮಚಂದ್ರಯ್ಯ ಎಂಬವರು ಬರೆದಿರುವ ಮೈಸೂರಿನ ವಿಸ್ಮಯ ಪ್ರಕಾಶನ ಪ್ರಕಟಿಸಿರುವ ಮೌಲ್ಯದರ್ಶನ ದಿ ಎಸ್ಸೆನ್ಸ್ ಆಫ್ ವ್ಯಾಲ್ಯೂ ಎಜುಕೇಶನ್ ಎಂಬ ಆಂಗ್ಲ ಕೃತಿಯಲ್ಲಿ ಇಸ್ಲಾಂ, ಮುಸ್ಲಿಮರನ್ನು ಮತ್ತು ಪ್ರವಾದಿ ಮುಹಮ್ಮದ್ ಅವರನ್ನು ನಿಂದಿಸಲಾಗಿದೆ. ಈ ಕೃತಿಯನ್ನು ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳು ಕೂಡ ಬಿಎಡ್ ಮೂರನೇ ಸೆಮಿಸ್ಟರ್ ಪಠ್ಯಪುಸ್ತಕವಾಗಿ ಆಯ್ಕೆ ಮಾಡಿಕೊಂಡಿದೆ. ಉದ್ದೇಶಪೂರ್ವಕರಾಗಿ ಕೋಮುಭಾವನೆಯನ್ನು ಕೆರಳಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ಲೇಖಕ ಹಾಗೂ ಪ್ರಕಾಶಕರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಕ್ಯಾಂಪಸ್ ಫ್ರಂಟ್ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಮಂಗಳೂರು ನಗರ ಅಧ್ಯಕ್ಷ ಶರ್ಫುದ್ದೀನ್ ಬಜ್ಪೆ, ಕಾರ್ಯದರ್ಶಿ ಹಫೀಝ್, ಮಂಗಳೂರು ಗ್ರಾಮಾಂತರ ಅಧ್ಯಕ್ಷ ಅಶ್ರಫ್ ಪೂರ್ಕೋಡಿ, ಉಪಾಧ್ಯಕ್ಷ ಝಹೀರ್, ಕೋಶಾಧಿಕಾರಿ ಹಕೀಮ್, ಶಬೀರ್, ಶಿಫಾನ್ ಮತ್ತು ಅಫ್ತಾಬ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News