ಕೇರಳದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಧಾರಣ ಮಳೆ: ಹವಾಮಾನ ಇಲಾಖೆ
Update: 2021-10-17 21:34 IST
ತಿರುವನಂತಪುರ, ಅ. 17: ಕೇರಳದಲ್ಲಿ ಮುಂದಿನ 24 ಗಂಟೆಗಳ ಕಾಲ ಲಘುವಿನಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ಹೇಳಿದೆ. ಆಗ್ನೇಯ ಅರಬಿ ಸಮುದ್ರ ಹಾಗೂ ಸಮೀಪದ ಕೇರಳ ವಾಯು ಭಾರ ಕುಸಿತದ ಪ್ರದೇಶ ಎಂದು ಗುರುತಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಹಲವು ಪ್ರದೇಶಗಳಲ್ಲಿ ಲಘವಿನಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ದುರ್ಗಮ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. ಅನಂತರ ಕಡಿಮೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.