ಮಳೆಯ ಮಧ್ಯೆ ಮಲ್ಪೆ ಬೀಚ್‌ನಲ್ಲಿ ಉಡುಪಿ ಡಿಸಿ, ಸಿಇಒ, ಶಾಸಕರಿಂದ ಸ್ವಚ್ಛತಾ ಅಭಿಯಾನ

Update: 2021-10-17 16:17 GMT

ಮಲ್ಪೆ, ಅ.17: ಅಝಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಕೇಂದ್ರ ಸರಕಾರದ ಯುವಜನ ಕಾರ್ಯ ಹಾಗೂ ಕ್ರೀಡಾ ಸಚಿವಾಲಯವು ನೆಹರು ಯುವ ಕೇಂದ್ರ ಸಂಘಟನೆ, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ., ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್, ಯುವಕ ಮಂಡಲಗಳು, ಸ್ವಚ್ಛ ಭಾರತ್ ಫ್ರೆಂಡ್ಸ್ ಹಾಗೂ ಜೇಸಿಐ ಇವುಗಳ ಸಂಯುಕ್ತ ಆಶ್ರಯದಲ್ಲಿ ಕ್ಲೀನ್ ಇಂಡಿಯಾ ಕಾರ್ಯಕ್ರಮ ಇಂದು ಮಲ್ಪೆ ಬೀಚ್‌ನಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಜಂಟಿಯಾಗಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಜಿಲ್ಲಾಧಿಕಾರಿ, ಪ್ರವಾಸಿ ಸ್ಥಳಗಳ ಸ್ವಚ್ಛತೆ ಕಾಪಾಡುವಲ್ಲಿ ಪ್ರತಿಯೊಬ್ಬರೂ ಕ್ರಿಯಾ ಶೀಲ ಪ್ರಯತ್ನ ಮಾಡಬೇಕು. ಮರುಬಳಕೆಯ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿದರೆ ಸ್ವಚ್ಛತೆಯನ್ನು ಕಾಪಾಡುವಲ್ಲಿ ದೊಡ್ಡ ಹೆಜ್ಜೆ ಇಡಲು ಸಾಧ್ಯವಾಗು ತ್ತದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಲೀಡ್ ಬ್ಯಾಂಕ್ ಕೆನರಾ ಬ್ಯಾಂಕ್ ವಿಭಾಗೀಯ ವ್ಯವಸ್ಥಾಪಕ ಪಿಂಜರ್, ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಮಾರ್ಟಿಸ್ ಮೊದಲಾದವರು ಉಪಸ್ಥಿತರಿದ್ದರು. ಸ್ವಚ್ಛ ಭಾರತದ ರಾಜ್ಯ ಸಂಪನ್ಮೂಲ ವ್ಯಕ್ತಿ ಜೋಸೆಫ್ ರೆಬೆಲ್ಲೋ ಸಹಕರಿಸಿದರು.

ಜಿಲ್ಲಾಧಿಕಾರಿ, ಶಾಸಕರು, ಅಪರ ಜಿಲ್ಲಾಧಿಕಾರಿ ಮಳೆಯ ನಡುವೆ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು. ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ವಿಲ್ಫ್ರೆಡ್ ಡಿಸೋಜ ಸ್ವಾಗತಿಸಿ, ಯುವಜನ ಕ್ರೀಡಾ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿ ವಂದಿಸಿದರು. ಸುಮಾರು 80ಕ್ಕಿಂತ ಹೆಚ್ಚಿನ ಚೀಲಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News