ಪುತ್ತೂರು: ವೃದ್ಧ ದಂಪತಿ ಆತ್ಮಹತ್ಯೆ

Update: 2021-10-18 06:45 GMT

ಪುತ್ತೂರು: ವೃದ್ಧ ದಂಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ರಾತ್ರಿ ನಡೆದಿದ್ದು, ಸೋಮವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.

ಪುತ್ತೂರು ತಾಲೂಕಿನ ಬಡಗನ್ಮೂರು ಗ್ರಾಮದ ಪಾದೆಕರ್ಯ ಎಂಬಲ್ಲಿನ ನಿವಾಸಿ ಸುಬ್ರಹ್ಮಣ್ಯ ಭಟ್ (84) ಮತ್ತು ಅವರ ಪತ್ನಿ ಶಾರದ (76) ಆತ್ಮಹತ್ಯೆ ಮಾಡಿಕೊಂಡ ದಂಪತಿ.

ಅವರಿಬ್ಬರೂ ಮನೆಯ ಕೊಠಡಿಯೊಂದರಲ್ಲಿ  ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. 

ಸೋಮವಾರ ಬೆಳಗ್ಗೆ ಅವರ ಪುತ್ರ ಕೊಠಡಿಗೆ ಬಂದಾಗ ವಿಚಾರ ಬೆಳಕಿಗೆ ಬಂದಿದೆ. ಸಂಪ್ಯ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News