''ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು, ಆದರೂ ಪ್ರಧಾನಿ ಮೋದಿ ಓದಲಿಲ್ಲ'': ಕಾಂಗ್ರೆಸ್ ವ್ಯಂಗ್ಯ

Update: 2021-10-18 17:57 GMT
ಫೈಲ್ ಚಿತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕರ್ನಾಟಕ ಕಾಂಗ್ರೆಸ್, ಸಮಸ್ಯೆಗಳ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಆರೋಪಿಸಿ ಪ್ರಧಾನಿಯ ಮೌನವನ್ನು ಪ್ರಶ್ನಿಸಿದೆ. 

ಸರಣಿ ಟ್ವೀಟ್ ಗಳನ್ನು ಮಾಡಿರುವ ಕಾಂಗ್ರೆಸ್, ಇಂಧನ ಬೆಲೆಯೇರಿಕೆ ಖಂಡಿಸಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. 

ಕಾಂಗ್ರೆಸ್ ಟ್ವೀಟ್ ಇಂತಿವೆ

''ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು, ಆದರೂ ಪ್ರಧಾನಿ ನರೇಂದ್ರ ಮೋದಿ ಓದಲಿಲ್ಲ, ವಯಸ್ಕರ ಶಿಕ್ಷಣ ಯೋಜನೆಯನ್ನೂ ಮಾಡಿತ್ತು ಆದರೂ ಓದಲಿಲ್ಲ, ಭಿಕ್ಷಾಟನೆ ನಿಷೇಧವಿದ್ದರೂ ಭಿಕ್ಷೆ ಬೇಡುವ ಸೋಂಬೇರಿ ಜೀವನದ ಗೀಳಿಗೆ ಬಿದ್ದವರು ಇಂದು ದೇಶವಾಸಿಗಳನ್ನು ಬಿಕ್ಷುಕರನ್ನಾಗಿಸಿದ್ದಾರೆ.  ದೇಶ ನರಳುತ್ತಿದೆ'' ಎಂದು ವ್ಯಂಗ್ಯವಾಡಿದೆ.

''ವಾಸ್ತವಗಳ ಬಗ್ಗೆ ಮಾತನಾಡದ ಪ್ರಧಾನಿ ತಮ್ಮ ಹೆಸರನ್ನು 'ಮೌನೇಂದ್ರ ಮೋದಿ' ಎಂದು ಬದಲಿಸಿಕೊಳ್ಳಲಿ. ಬೆಲೆ ಏರಿಕೆಯ ಬಗ್ಗೆ -ಮೌನ ಕಾಶ್ಮೀರದ ದಳ್ಳುರಿಗೆ -ಮೌನ , ಚೀನಾ ಅತಿಕ್ರಮಣಕ್ಕೆ -ಮೌನ , ರೈತರ ಹತ್ಯೆಗೆ -ಮೌನ , ಅದಾನಿ ಡ್ರಗ್ಸ್ ದಂಧೆಯ ಬಗ್ಗೆ -ಮೌನ ನಿರುದ್ಯೋಗದ ಬಗ್ಗೆ -ಮೌನ , ಪತ್ರಿಕಾಗೋಷ್ಠಿಗೆ -ಮೌನ '' ಎಂದು ಆಕ್ರೋಶ ವ್ಯಕ್ತಪಡಿಸಿದೆ. 

''ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಇಂದು ಪೆಟ್ರೋಲ್ ₹66, ಡೀಸೆಲ್ ₹55 ಕ್ಕೆ ದೊರಕುತ್ತಿತ್ತು. ಜನರನ್ನು ದೋಚಿ, ಉದ್ಯಮಿಗಳ ಹೊಟ್ಟೆ ತುಂಬಿಸುವ ಯೋಜನೆ ಹೊಂದಿರುವ ಬಿಜೆಪಿ ಸರ್ಕಾರದ ತೆರಿಗೆ ಭಯೋತ್ಪಾದನೆಯಿಂದ ಎಲ್ಲಾ ಅಗತ್ಯ ವಸ್ತುಗಳು ದುಬಾರಿಯಾಗಿವೆ. ಜನರ ಕಷ್ಟಗಳನ್ನು ತಿಳಿಯದ ಮೋದಿ ಯಿಂದ ದೇಶ ನಲುಗುತ್ತಿದೆ'' ಎಂದು ಕಾಂಗ್ರೆಸ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News