ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಎಸ್‌ಒಪಿ2’ ದಿನನಿತ್ಯದ ತಪಾಸಣೆ ಸ್ಥಗಿತ: ಡಿಸಿ ಡಾ. ರಾಜೇಂದ್ರ

Update: 2021-10-18 14:58 GMT

ಮಂಗಳೂರು, ಅ.18: ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ವಿಮಾನಯಾನ ಕಾರ್ಯಾಚರಣೆಗಳನ್ನು ಸರಳಗೊಳಿಸಲಾಗಿದೆ. ಜ್ವರ, ಕೆಮ್ಮು, ಶೀತ, ಉಸಿರಾಟದ ತೊಂದರೆ ಇತ್ಯಾದಿಗಳನ್ನು ಹೊರತುಪಡಿಸಿ, ‘ಎಸ್‌ಒಪಿ2’ ದಿನನಿತ್ಯದ ತಪಾಸಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಭಾರತ ಸರಕಾರದಿಂದ ಸೂಚಿಸಲಾದ ಆಯ್ದ ದೇಶಗಳಿಂದ ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರನ್ನು ಹೊರತುಪಡಿಸಿ, ಉಳಿದ ಪ್ರಯಾಣಿಕರ ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿ ಪರಿಶೀಲನೆಯನ್ನು ಸ್ಥಗಿತಗೊಳಿಸಲಾಗಿದೆ. ಬದಲಾಗಿ, ಪ್ರಯಾಣಿಕರು ಏರ್ ಸುವಿಧಾ ಪೋರ್ಟಲ್‌ನಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿಯನ್ನು ಕಡ್ಡಾಯವಾಗಿ ಅಪ್‌ಲೋಡ್ ಮಾಡುವುದು. ಆ ಪರೀಕ್ಷಾ ವರದಿಗಳನ್ನು ಸಂಬಂಧಿತ ಏರ್‌ಲೈನ್ಸ್ ಸಂಸ್ಥೆಯು ಪ್ರಯಾಣಿಕರ ಬೋರ್ಡಿಂಗ್‌ನ ಮುಂಚಿತವಾಗಿ ಪರಿಶೀಲಿಸುವುದು, ಸ್ವಯಂಚಾಲಿತ ಥರ್ಮಲ್ ಕ್ಯಾಮೆರಾಗಳ ಮೂಲಕ ಪ್ರಯಾಣಿಕರ ಮೇಲ್ವಿಚಾರಣೆಯನ್ನು ನಡೆಸಬೇಕು. ಯುನೈಟೆಡ್ ಕಿಂಗ್‌ಡಮ್‌ ನಿಂದ ಆಗಮಿಸುವವರಿಗೆ ಕ್ವಾರಂಟೈನ್ ಶಿಷ್ಟಾಚಾರಕ್ಕೆ ಸಂಬಂಧಿಸಿದಂತೆ, ಭಾರತ ಸರಕಾರವು ಹೊರಡಿಸಿರುವ ಮಾರ್ಗ ಸೂಚಿಗಳನ್ನು ಅನುಸರಿಸಲಾಗುವುದು. ಅಲ್ಲದೆ, ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪ್ರತ್ಯೇಕ ಸ್ಪಷ್ಟೀಕರಣ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News