ಕಾರು ಢಿಕ್ಕಿ: ಪಾದಚಾರಿ ಮೃತ್ಯು

Update: 2021-10-18 16:06 GMT

ಕೋಟ, ಅ.18: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಾಸ್ತಾನ ಟೋಲ್‌ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ.17ರಂದು ಸಂಜೆ ವೇಳೆ ನಡೆದಿದೆ.

ಮೃತರನ್ನು ಕೃಷ್ಣಮೂರ್ತಿ ತುಂಗ(67) ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು ಮನೆಗೆ ನಡೆದು ಕೊಂಡು ಹೋಗುತ್ತಿದ್ದ ತುಂಗ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು, ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News