'ಯುವ ಸ್ಪರ್ಶ ಯುವಕರ ನಡೆ ಗ್ರಾಮದ ಅಭಿವೃದ್ಧಿ ಕಡೆ' ಕಾರ್ಯಕ್ರಮಕ್ಕೆ ಚಾಲನೆ

Update: 2021-10-18 17:08 GMT

ಕಾಪು : ಜನರಿಗೆ ಅಗತ್ಯ ಸೇವೆಯನ್ನು ನೀಡುವುದರೊಂದಿಗೆ ಯುವಕರಿಗೆ  ಸಾಮಾಜಿಕ ಕೆಲಸ ಕಾರ್ಯಗಳ ಮೂಲಕ ಪಕ್ಷದ ವರ್ಚಸ್ಸು ಇನ್ನಷ್ಟು ಬಲಪಡಿಸಲು ವಿವಿಧ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ಸಮಾಜದ ಕೆಲವರ್ಗದ ಸೇವೆ ನೀಡಲು ಸಂಘಟನಾತ್ಮಕ ಕೆಲಸ ಕಾರ್ಯಗಳನ್ನು ಮಾಡಬೇಕಾಗಿದೆ ಎಂದು ಕೆಪಿಸಿಸಿ ಸಂಯೋಜಕ ನವೀನ್‍ ಚಂದ್ರ ಜೆ. ಶೆಟ್ಟಿ ಕರೆ ನೀಡಿದರು.

ಅವರು ಕಾಪು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಕಾಪು ರಾಜೀವ್ ಭವನದಲ್ಲಿ  ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ ಕಾಪು ಕ್ಷೇತ್ರದಾದ್ಯಂತ ಗ್ರಾಮೀಣ ಕಾಂಗ್ರೆಸ್ ಹಾಗೂ ಗ್ರಾಮೀಣ ಯುವ ಕಾಂಗ್ರೆಸ್ ಸಹಯೋಗದಲ್ಲಿ ಗ್ರಾಮೀಣ ಮಟ್ಟದಲ್ಲಿ ನಡೆಸುವ ವಿನೂತನ ಯೋಜನೆ ಯುವ ಸ್ಪರ್ಶ ಯವಕರ ನಡೆ ಗ್ರಾಮೀಣ ಅಭಿವೃದ್ಧಿ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಭಿತ್ತಿ ಪತ್ರವನ್ನು  ಬಿಡುಗಡೆಗೊಳಿಸಿ ಮಾತನಾಡಿದರು.

ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಝ್  ಹುಸೈನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ  ಯುವಕ ರನ್ನು ಒಗ್ಗೂಡಿಸಿ  ಸರ್ಕಾರದಿಂದ ಸವಲತ್ತುಗಳ ಬಗ್ಗೆ ಜನರಿಗೆ ಮಾಹಿತಿ ನೀಡುವುದು, ಸ್ವಚ್ಚತಾ ಕಾರ್ಯಕ್ರಮ, ರಕ್ತದಾನ ಶಿಬಿರ, ಯುವಜನತೆಗೆ ಕ್ರೀಡಾ ಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ, ಅರೋಗ್ಯ ತಪಾಸಣಾ ಶಿಬಿರ , ಮತದಾರರ ಪಟ್ಟಿಗೆ ನೂತನ ಮತದಾರರ ಸೇರ್ಪಡೆ ಮತ್ತು ತಿದ್ದುಪಡಿ, ಗ್ರಾಮದ ಅಭಿವೃದ್ಧಿಯ ಬಗ್ಗೆ  ಸಮಾಲೋಚನೆ ಸಭೆಗಳನ್ನು ನಡೆಸುವುದು ಮೂಲಕ ಇಂತಹ ವಿನೂತನ ಕಾರ್ಯಕ್ರಮದ ಉದ್ದೇಶ ಎಂದರು.

ಗಾಮೀಣ ಯುವ ಕಾಂಗ್ರೆಸ್‍ನ ನೂತನ ಅಧ್ಯಕ್ಷರಾಗಿ ಅಯ್ಕೆಗೊಂಡವರಿಗೆ ಅದೇಶ ಪಾತ್ರವನ್ನು ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ನವೀನ್ ಚಂದ್ರ ಸುವರ್ಣ ಅಡ್ವೆ ವಿತರಿಸಿದರು. ಕಾಂಗ್ರೆಸ್ ಪಕ್ಷಕ್ಕೆ  ವಿಘ್ನೇಶ್ ಆಚಾರ್ಯ ಪಡುಬಿದ್ರಿ ಅವರನ್ನು ಪಕ್ಷದ ಶಾಲು ಹಾಕಿ ಸೇರ್ಪಡೆ ಗೊಳಿಸಿದರು. ಕೆಪಿಸಿಸಿ ಸಂಯೋಜಕ ದೇವಿಪ್ರಸಾದ್ ಶೆಟ್ಟಿ ಯುವ ಕಾಂಗ್ರೆಸ್ ಸದಸ್ಯರಿಗೆ ಗುರುತು ಪತ್ರ ವಿತರಿಸಿದರು.

ಉಡುಪಿ ಜಿಲ್ಲಾ ಯುವ  ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನಾ, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೆಲ್ವಿನ್ ಡಿ`ಸೋಜ, ಕೆಪಿಸಿಸಿ ಸಂಯೋಜಕ ಅಬ್ದುಲ್ ಅಜೀಜ್ ಹೆಜಮಾಡಿ, ಕಾಪು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶರ್ಪುದ್ದೀನ್ ಶೇಕ್, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕರ್ಕೇರ, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಲಕ್ಷಣ್ ಪೂಜಾರಿ, ಇರ್ವಿನ್ ಸೋನ್ಸ್,  ಜಗದೀಶ್, ಅಶ್ವಿನಿ ಬಂಗೇರ, ಉಪಸ್ಥಿತರಿದ್ದರು.

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಿಯಾಝ್ ಮುದರಂಗಡಿ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಕೀರ್ತಿ ಕುಮಾರ್ ನಿರೂಪಿಸಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News