ವಿಕಾಸ್ ಕಾಲೇಜು: ‘ವಿಕಾಂ’ ವಿದ್ಯಾರ್ಥಿ ಸಂಘ ಉದ್ಘಾಟನೆ ಕಾರ್ಯಕ್ರಮ

Update: 2021-10-19 06:28 GMT

ಮಂಗಳೂರು, ಅ.19: ನಗರದ ಮೇರಿಹಿಲ್ ನಲ್ಲಿರುವ ವಿಕಾಸ್ ಕಾಲೇಜಿನ ಪಿಯುಸಿ ವಾಣಿಜ್ಯ ವಿಭಾಗದ ‘ವಿಕಾಂ’ ವತಿಯಿಂದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿಕಾಸ್ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಜೆ.ಕೊರಗಪ್ಪ ಮಾತನಾಡಿ, ದೇಶದ ಆರ್ಥಿಕ ಸ್ಥಿತಿಗೆ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಕೊಡುಗೆ ಪ್ರಮುಖವಾದದ್ದು ಎಂದರು. 

ವಿಕಾಸ್ ಕಾಲೇಜಿನ ಮುಖ್ಯಸ್ಥ  ಕೃಷ್ಣ ಜೆ. ಪಾಲೇಮಾರ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಮನ್ವಯಾಧಿಕಾರಿ ಪಾರ್ಥಸಾರಥಿ ಜೆ. ಪಾಲೇಮಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಕಾಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಐಶ್ವರ್ಯ ರಾವ್ ಪ್ರತಿಜ್ಞಾ ವಿಧಿ ನೆರವೇರಿಸಿದರು. 

ವಿಭಾಗ ಮುಖ್ಯಸ್ಥೆ ಸುಗುಣಾ ನಾಯಕ್ ವಾರ್ಷಿಕ ಯೋಜನೆಯ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳಾದ ಜಯ್ ಮೆಹ್ತಾ  ಸ್ವಾಗತಿಸಿದರು. ಅಭಿಷೇಕ್  ವಂದಿಸಿದರು. ಅನನ್ಯ ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News