ರಾಹುಲ್ ಗಾಂಧಿ ಡ್ರಗ್ ಪೆಡ್ಲರ್: ನಳಿನ್ ಕುಮಾರ್ ವಿವಾದಾತ್ಮಕ ಹೇಳಿಕೆ

Update: 2021-10-19 09:31 GMT

ಹುಬ್ಬಳ್ಳಿ, ಅ.19: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಓರ್ವ ಡ್ರಗ್ಸ್ ಅಡಿಕ್ಟ್, ಡ್ರಗ್ ಪೆಡ್ಲರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ವಿವಾದಾತ್ಮಕ ಹೇಳಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಮಾತನಾಡಿದ ನಳಿನ್ ಕುಮಾರ್ ಅವರು, ರಾಹುಲ್ ಗಾಂಧಿ ಓರ್ವ ಡ್ರಗ್ಸ್ ಅಡಿಕ್ಟ್, ಡ್ರಗ್ ಪೆಡ್ಲರ್. ಹೀಗೆಂದು ನಾನು ಹೇಳ್ತಾ ಇಲ್ಲ, ಪತ್ರಿಕೆಗಳಲ್ಲಿ ಬಂದಿವೆ ಎಂದು ಹೇಳಿದರು.

ರಾಹುಲ್ ಗಾಂಧಿಗೆ ಪಕ್ಷವನ್ನೆ ಸಂಭಾಳಿಸಲು ಆಗುತ್ತಿಲ್ಲ.. ಸೋನಿಯಾ ಗಾಂಧಿಗೂ ಆಗುತ್ತಿಲ್ಲ. ಪಕ್ಷವನ್ನು ನಡೆಸಲಾಗದವರಿಗೆ ದೇಶವನ್ನು ನಡೆಸಲು ಸಾಧ್ಯವೇ? ಇಂತಹವರು ನಮ್ಮ ಪ್ರಧಾನಿ ಬಗ್ಗೆ ಟೀಕೆ ಮಾಡ್ತಾರೆ ಎಂದು ನಳಿನ್ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ನವರು ಪಕ್ಷ ಕಟ್ಟಲು ವಿಲವಿಲ ಒದ್ದಾಡುತ್ತಿದ್ದಾರೆ. ಇಂತಹವರು ನಮ್ಮ ಪ್ರಧಾನಿ ಬಗ್ಗೆ ಹೆಬ್ಬಟ್ಟು ಅಂತಾ ಟೀಕೆ ಮಾಡ್ತಾರೆ

ನಮ್ಮ ಪ್ರಧಾನಿ ಏಳು ವರ್ಷದ ಆಡಳಿತದಲ್ಲಿ ಬಲಿಷ್ಠ ರಾಷ್ಟ್ರವನ್ನಾಗಿ ಮಾಡಿದ್ದಾರೆ. ಪಾಕಿಸ್ತಾನ ಹಾಗೂ ಚೀನಾಗೆ ಆಗಾಗ ತಕ್ಕ ಉತ್ತರ ನೀಡಿದ್ದಾರೆ ಎಂದು ನಳಿನ್ ನುಡಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News