ಎಸ್ಸಿ-ಎಸ್ಟಿ ಉದ್ಯಮಿಗಳಿಗೆ ಶೇ.4ರ ಬಡ್ಡಿ ದರದಲ್ಲಿ 1ಕೋಟಿ ರೂ.ಸಾಲ: ಉದ್ಯಮಿಗಳಿಂದ ಅರ್ಜಿ ಆಹ್ವಾನ

Update: 2021-10-19 12:42 GMT

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್ಟಿ)ದ ಉದ್ಯಮಿಗಳಿಗೆ ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆ ನಡೆಸಲು 2021-22ನೆ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಶೇ.4ರ ಬಡ್ಡಿ ದರದಲ್ಲಿ 1 ಕೋಟಿ ರೂ.ಗಳ ವರೆಗೆ ಸಾಲ ಸೌಲಭ್ಯಕ್ಕೆ ಎಸ್ಸಿ-ಎಸ್ಟಿ ಸಮುದಾಯದ ಅರ್ಹ ಉದ್ಯಮಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಉದ್ಯಮಿಗಳು ರಾಷ್ಟ್ರೀಕೃತ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್‍ಗಳಿಂದ ಪಡೆದ ಸಾಲಗಳಿಗೆ ಬಡ್ಡಿ ಸಹಾಯಧನ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಎಸ್ಸಿ-ಎಸ್ಟಿ ಉದ್ಯಮಿಗಳಿಗೆ ಹಾಲಿ ಜಾರಿಯಲ್ಲಿರುವ ಶೇ.4ರಷ್ಟು ಬಡ್ಡಿ ಸಹಾಯಧನ ಯೋಜನೆಯನ್ನು ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆಗಳಾದ ಮಳಿಗೆ, ಡೀಲರ್‍ಶಿಪ್, ಪ್ರಾಂಚೈಸಿ ಮತ್ತು ಹೊಟೇಲ್ ಉದ್ಯಮಗಳನ್ನು ಪ್ರಾರಂಭಿಸಲು ವಿಸ್ತರಿಸಿ, ಈ ಯೋಜನೆಯಡಿ ಗರಿಷ್ಠ ರೂ.1 ಕೋಟಿಯವರೆಗೆ ಶೆಡ್ಯೂಲ್ಡ್ ಬ್ಯಾಂಕ್‍ಗಳಿಂದ ಸಾಲ ಪಡೆಯಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News